ನವದೆಹಲಿ: ಆಮ್ ಆದ್ಮಿ ಪಕ್ಷ (AAP) ಇಸುದನ್ ಗಧ್ವಿ (Isudan Gadhvi) ಅವರನ್ನು ಗುಜರಾತ್‌ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಶುಕ್ರವಾರ ಘೋಷಿಸಿದೆ. ಡಿ.1 ಮತ್ತು 5 ರಂದು ಎರಡು ಹಂತದಲ್ಲಿ ಗುಜರಾತ್ ವಿಧಾನಸಭೆ ಚುನಾವಣೆಗೆ (Gujarat Assembly Election) ಮತದಾನ ನಡೆಯಲಿದೆ.
ಮಾಜಿ ಪತ್ರಕರ್ತ ಮತ್ತು ಟಿವಿ ನಿರೂಪಕ ಇಸುದನ್ ಗಧ್ವಿ ಅವರು, ಗುಜರಾತ್ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಕುರಿತು ಎಎಪಿ ನಡೆಸಿದ ಸಮೀಕ್ಷೆಯಲ್ಲಿ ಶೇ.73 ರಷ್ಟು ಮತಗಳನ್ನು ಗಳಿಸಿದ್ದಾರೆ. ಪಂಜಾಬ್‌ನಲ್ಲಿ ಇದೇ ರೀತಿಯ ಸಮೀಕ್ಷೆಯ ನಂತರ ಪಕ್ಷವು ಭಗವಂತ್ ಮಾನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿತ್ತು. ಇದನ್ನೂ ಓದಿ: ಗುಜರಾತ್ ಚುನಾವಣೆ – ಇಂದು ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ
ಇಸುದನ್ ಗಧ್ವಿ ಕಳೆದ ವರ್ಷ ಜೂನ್‌ನಲ್ಲಿ ಎಎಪಿ ಸೇರಿದ್ದರು. ಸದ್ಯ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ, ಪ್ರಧಾನ ಕಾರ್ಯದರ್ಶಿ ಮನೋಜ್ ಸೊರತಿಹ್ಯ ಸಿಎಂ ಅಭ್ಯರ್ಥಿಯ ರೇಸ್‌ನಲ್ಲಿದ್ದರು.
ಗುಜರಾತ್ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ವಿಧಾನಸಭೆಯ 182 ಸ್ಥಾನಗಳ ಪೈಕಿ ಮೊದಲ ಹಂತದಲ್ಲಿ 89 ಮತ್ತು ಎರಡನೇ ಹಂತದಲ್ಲಿ 93 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ವರ್ಷ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಜೆಪಿಗೆ ಅಧಿಕಾರ – ಆಪ್‌ಗೆ ಮೂರನೇ ಸ್ಥಾನ