– ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಿಸಿದ ರಾಷ್ಟ್ರಪತಿ
ನವದೆಹಲಿ: ಕೇಂದ್ರ ಗೃಹ ಸಚಿವಾಲಯದ ಮಾಜಿ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ (Ajay Kumar Bhalla) ಅವರು ಮಂಗಳವಾರ ಮಣಿಪುರದ (Manipur) ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
ಮಣಿಪುರ ಸೇರಿದಂತೆ ರಾಷ್ಟ್ರಪತಿಗಳು ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸಿದ್ದಾರೆ. ಒಡಿಶಾ, ಮಿಜೋರಾಂ, ಕೇರಳ, ಬಿಹಾರ ರಾಜ್ಯಗಳಿಗೂ ನೂತನ ರಾಜ್ಯಪಾಲರು ನೇಮಕವಾಗಿದ್ದಾರೆ. ಇದನ್ನೂ ಓದಿ: ಹೊಸ ಧಾರ್ಮಿಕ ವಿವಾದ ಕೆದಕಬೇಡಿ ಎಂದಿದ್ದಕ್ಕೆ ಸಿಟ್ಟು – ಭಾಗವತ್ ವಿರುದ್ಧ ಸ್ವಾಮೀಜಿಗಳ ಆಕ್ರೋಶ
ಹಿಂದಿನ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಸಚಿವ ವಿಕೆ ಸಿಂಗ್ ಅವರನ್ನು ಹೊಸ ಮಿಜೋರಾಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಕೇರಳ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರನ್ನು ಅದಲು ಬದಲು ಮಾಡಲಾಗಿದೆ. ಕೇರಳ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಅವರು ಈಗ ಬಿಹಾರದ ರಾಜ್ಯಪಾಲರಾಗಿದ್ದಾರೆ. ಅಂತೆಯೇ, ಬಿಹಾರದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಈಗ ಕೇರಳದ ರಾಜ್ಯಪಾಲರಾಗಿ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ: ದೆಹಲಿ ಹೈಕೋರ್ಟ್
ಒಡಿಶಾ ರಾಜ್ಯಪಾಲ ರಘುಬರ್ ದಾಸ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದಾರೆ. ಅವರ ಸ್ಥಾನಕ್ಕೆ ಮಿಜೋರಾಂ ರಾಜ್ಯಪಾಲ ಡಾ. ಹರಿಬಾಬು ಕಂಬಂಪತಿ ಅವರನ್ನು ಒಡಿಶಾ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಮಣಿಪುರದಲ್ಲಿ ಹಿಂದೂ ಮೈತೇಯಿ ಬಹುಸಂಖ್ಯಾತರು ಮತ್ತು ಕ್ರಿಶ್ಚಿಯನ್ ಕುಕಿ ಸಮುದಾಯದ ನಡುವಿನ ಘರ್ಷಣೆ ಮುಂದುವರಿದಿದೆ. ರಾಜ್ಯದಲ್ಲಿ ಸಂಘರ್ಷದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.