ಜಾರ್ಖಂಡ್: ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸೊಸೆ ಪ್ರಕರಣ ದಾಖಲಿಸಿದ್ದರಿಂದ ಮನನೊಂದು ಉತ್ತರಾಖಂಡದ ಮಾಜಿ ಸಚಿವ ರಾಜೇಂದ್ರ ಬಹುಗುಣ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ಪೊಲೀಸರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದ ರಾಜೇಂದ್ರ ಬಹುಗುಣ ಅವರು ಪೊಲೀಸರು ಬರುವಷ್ಟರಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾರೆ. ಅಲ್ಲದೇ ಆತ್ಮಹತ್ಯೆಗೆ ಬಳಸಿದ್ದ ಪಿಸ್ತೂಲ್ ಮೃತ ದೇಹದ ಬಳಿ ಪತ್ತೆಯಾಗಿದೆ. ಇದನ್ನೂ ಓದಿ: ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕ್ಬೇಕು: ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ
ಪೊಲೀಸರು ಬಂದಾಗ ರಾಜೇಂದ್ರ ಬಹುಗುಣ ಅವರು ಟ್ಯಾಂಕ್ ಮೇಲೆ ಏರಿ ಗುಂಡು ಹಾರಿಸಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದಾರೆ. ನಂತರ ಪೊಲೀಸರು ಧ್ವನಿವರ್ಧಕದ ಮೂಲಕ ಅವರೊಂದಿಗೆ ಮಾತನಾಡಲು ಪ್ರಯತ್ನಿಸಿದ್ದಾರೆ. ಆದರೆ ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ತಿಳಿಸಿದ್ದಾರೆ.
ಬಳಿಕ ಆತ್ಮಹತ್ಯೆ ನಿರ್ದಾರ ಬಿಟ್ಟು ಕೆಳಗಿಳಿಯುವಂತೆ ಪೊಲೀಸರು ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ಇದ್ದಕ್ಕಿದಂತೆ ಪಿಸ್ತೂಲ್ನಿಂದ ಎದೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಂಕಜ್ ಭಟ್ ಎನ್ಡಿಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಟಿಕೆಟ್ ನನಗೆ ಕೊಡಬೇಡಿ- ನಡ್ಡಾಗೆ ಸುರಾನಾ ಪತ್ರ
ರಾಜೇಂದ್ರ ಬಹುಗುಣ ಅವರ ಸೊಸೆ ನೀಡಿದ ದೂರಿನ ಆಧಾರದ ಮೇರೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ರಾಜೇಂದ್ರ ಬಹುಗುಣ ಅವರ ಪುತ್ರ ಅಜಯ್ ಬಹುಗುಣ ಅವರ ದೂರಿನ ಮೇರೆಗೆ ಅವರ ಸೊಸೆ, ಆಕೆಯ ತಂದೆ ಮತ್ತು ನೆರೆಹೊರೆಯವರು ಆತನ ಮೇಲೆ ಹಲ್ಲೆ ಆರೋಪ ಹೊರಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ರಾಜೇಂದ್ರ ಬಹುಗುಣ ಅವರಿಗೆ 2004-5ರಲ್ಲಿ ಎನ್ಡಿ ತಿವಾರಿ ಸರ್ಕಾರದಲ್ಲಿ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿತ್ತು. ರೋಡ್ವೇಸ್ ಒಕ್ಕೂಟದ ನಾಯಕರಾಗಿದ್ದ ಅವರು ಹಲ್ದ್ವಾನಿ ಡಿಪೋ ಕಾರ್ಯಾಗಾರದಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಅಕ್ಟೋಬರ್ 31 ರಂದು ನಿವೃತ್ತರಾದರು.