ಕೋಲ್ಕತ್ತಾ: ಪಶ್ಚಿಮ ಬಂಗಾಳದ (WestBengal) ಹೌರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ (Government) ನಡೆಯುತ್ತಿರುವ ಪರೀಕ್ಷೆಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಬ್ (Hijab), ಬುರ್ಕಾ ಧರಿಸಿ ಬಂದಿದ್ದಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಶಾಲಾ ಆಡಳಿತ ಮಂಡಳಿ ಪರೀಕ್ಷೆಯನ್ನೇ ರದ್ದುಗೊಳಿಸಿದೆ.
ಪರೀಕ್ಷೆ ವೇಳೆ ಬುರ್ಕಾ, ಹಿಜಬ್ ಧರಿಸಿ ಬಂದಿದ್ದಕ್ಕಾಗಿ ಮತ್ತೊಂದು ವಿದ್ಯಾರ್ಥಿನಿಯರ (Students) ಗುಂಪು ತಮಗೆ ಶಾಲು ಧರಿಸಲು ಅವಕಾಶ ನೀಡುವಂತೆ ಒತ್ತಾಯಿಸಿವೆ. ಎರಡು ಗುಂಪುಗಳ ನಡುವಿನ ವಾಗ್ವಾದವು ತಾರಕ್ಕೇರಿ ವಿದ್ಯಾರ್ಥಿನಿಯರ ದೊಡ್ಡಮಟ್ಟದ ಗಲಾಟೆ ನಡೆದಿದೆ. ಇದರಿಂದ ತಾಲೂಕು ಅಧಿಕಾರಿಗಳು ಪರೀಕ್ಷೆಯನ್ನೇ ರದ್ದು ಮಾಡಿದ್ದಾರೆ. ಇದನ್ನೂ ಓದಿ: JDS ಅಧಿಕಾರಕ್ಕೆ ಬಂದ್ರೆ 24 ಗಂಟೆಯಲ್ಲಿ ಸಂಪೂರ್ಣ ಸಾಲ ಮನ್ನಾ: HDK
ಏನಿದು ಘಟನೆ?
ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಸೋಮಾವರ ಕೆಲ ಶಾಲೆಗಳಲ್ಲಿ ಬೋರ್ಡ್ ಪರೀಕ್ಷೆಗಳು ನಡೆಯುತ್ತಿದ್ದವು. ಈ ವೇಳೆ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಕಾ, ಹಿಜಬ್ ಧರಿಸಿ ಶಾಲೆಗೆ ಬಂದಿದ್ದರು. ಇವರನ್ನು ಕಂಡ ಮತ್ತೊಂದು ಗುಂಪಿನ ವಿದ್ಯಾರ್ಥಿಗಳು ತಮಗೆ ಶಾಲು ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಶಾಲಾ ಆಡಳಿತಾಧಿಕಾರಿಗಳು ಸಮವಸ್ತ್ರ ಮಾತ್ರ ಧರಿಸಿ ಬರುವಂತೆ ತಾಕೀತು ಮಾಡಿದರು. ಆದರೂ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಬ್ ತೆಗೆಯಲು ನಿರಾಕರಿಸಿದರು. ಇದರಿಂದಾಗಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು ಪರಿಸ್ಥಿತಿ ಉದ್ವಿಗ್ನಕ್ಕೆ ತಿರುಗಿ, ಮಾರಾಮಾರಿ ಶುರುವಾಯಿತು. ಬಳಿಕ ಶಾಲೆಯ ಆಡಳಿತಾಧಿಕಾರಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಇದು ಶಾಲಾ ಆಂತರಿಕ ವಿಚಾರ ನಾವು ಮಧ್ಯ ಪ್ರವೇಶಿಸಲ್ಲ ಎಂದು ತಿಳಿಸಿದ್ದರು. ಇದನ್ನೂ ಓದಿ: 51ನೇ ವಯಸ್ಸಿನಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿರುವ ಮನೋಜ್ ತಿವಾರಿ
ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಸ್ಥಳೀಯ ಪೊಲೀಸರು ಶಾಲೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ವಿದ್ಯಾರ್ಥಿಗಳ ಗಲಾಟೆ ದೊಡ್ಡಮಟ್ಟಕ್ಕೆ ತಿರುಗಿದ್ದರಿಂದ ಪರೀಕ್ಷೆ ರದ್ದುಮಾಡಲಾಯಿತು.
ಕಳೆದ ಫಬ್ರವರಿಯಲ್ಲೂ ಹಿಜಬ್ ಧರಸಿ ಬಂದಿದ್ದನ್ನು ಪ್ರಶ್ನಿಸಿದ್ದರಿಂದ ಶಾಲೆಯ ಸಿಬ್ಬಂದಿಯ ಮೇಲೆ ದಾಳಿ ನಡೆದಿತ್ತು. 18 ಜನರನ್ನು ಬಂಧಿಸಲಾಗಿತ್ತು.