ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯಲ್ಲಿನ 2,500 ನಿರ್ವಾಹಕ ಹುದ್ದೆಗಳಿಗೆ ಭಾನುವಾರ (ಸೆ.1) ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಸಲುವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಸಕಲ ಸಿದ್ಧತೆ ಮಾಡಿಕೊಂಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ (H Prasanna), ಹೈದರಾಬಾದ್ ಕರ್ನಾಟಕದವರಿಗಾಗಿ (Hyderabad Karnataka) ಜು.14 ರಂದು ಪರೀಕ್ಷೆ ನಡೆಸಲಾಗಿತ್ತು. ಹೈದರಾಬಾದ್ ಕರ್ನಾಟಕವಲ್ಲದ ಇತರರಿಗೆ ಭಾನುವಾರ ಸೆ.1 ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ನಿಗಾವಹಿಸುವಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಈ ಪರೀಕ್ಷೆಯಲ್ಲಿ ಹೈದರಾಬಾದ್ ಕರ್ನಾಟಕದವರೂ ಬರೆಯಬಹುದು ಎಂದು ಹೇಳಿದ್ದಾರೆ.ಇದನ್ನೂ ಓದಿ: ಗೌರವ ಡಾಕ್ಟರೇಟ್ ನಿರಾಕರಿಸಿದ್ದು ಯಾಕೆ ಎಂದು ಹೇಳಿ ಮ್ಯಾಕ್ಸ್ ಬಗ್ಗೆ ಅಪ್‌ಡೇಟ್ ಕೊಟ್ಟ ಸುದೀಪ್
ಈ ಪರೀಕ್ಷೆಗೆ 23,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ (Dress Code) ಇದ್ದು, ಆ ಪ್ರಕಾರವೇ ಎಲ್ಲರೂ ಪರೀಕ್ಷೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.