ನವದೆಹಲಿ: ತರಗತಿಗಳಲ್ಲಿ ಹಿಜಬ್ ನಿಷೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ 2ನೇ ಬಾರಿಯೂ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ.
ಇಂದು ಬೆಳಗ್ಗೆ 10:30ಕ್ಕೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದ್ಯಾರ್ಥಿನಿ ಆಯಿಷಾ ಪರ ವಕೀಲ ದೇವದತ್ ಕಾಮತ್ ತುರ್ತು ಅರ್ಜಿ ವಿಚಾರಣೆ ನಡಸಬೇಕು ಎಂದು ಮುಖ್ಯ ನ್ಯಾಯಾಧೀಶ ರಮಣ ಪೀಠದಲ್ಲಿ ಮನವಿ ಮಾಡಿದರು.
Advertisement
Advertisement
ಇದೇ 28 ರಿಂದ ಪರೀಕ್ಷೆ ಆರಂಭವಾಗಲಿದೆ. ಶಾಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದರೆ 1 ವರ್ಷ ಹಾಳಾಗುತ್ತದೆ. ಹಾಗಾಗಿ ಶೀಘ್ರ ವಿಚಾರಣೆ ನಡೆಸಬೇಕು ಎಂದು ಅವರು ವಾದಿಸಿದರು. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಸೆಮಿಸ್ಟರ್ ಪರೀಕ್ಷೆಗೆ ಗೈರು
Advertisement
ಇದಕ್ಕೆ ಅಸಮಧಾನಗೊಂಡ ಸಿಜೆಐ, ಪ್ರಕರಣಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ. ಸಮಸ್ಯೆಯನ್ನು ಸೂಕ್ಷ್ಮಗೊಳಿಸಬೇಡಿ ಎಂದು ಹೇಳಿ ಮನವಿಯನ್ನು ತಿರಸ್ಕರಿಸಿ ಮತ್ತೊಂದು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡರು.
Advertisement
ಈ ಹಿಂದೆಯೇ ತುರ್ತು ವಿಚಾರಣೆ ಕೈಗೊಳ್ಳುವಂತೆಯೂ ಮನವಿ ಮಾಡಿದಾಗ ಹೋಳಿ ಹಬ್ಬದ ರಜೆಯ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತ್ತು. ಇದನ್ನೂ ಓದಿ: ಹೈಕೋರ್ಟ್ ಜಡ್ಜ್‌ಗೆ ಬೆದರಿಕೆ – ತನಿಖೆ ಚುರುಕುಗೊಳಿಸಿದ ಪೊಲೀಸರು
ಶಾಲೆಯಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಪಾಲಿಸಬೇಕೆಂಬ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಅಷ್ಟೇ ಅಲ್ಲದೇ ಹಿಜಬ್ ಮುಸ್ಲಿಂ ಧರ್ಮದ ಕಡ್ಡಾಯ ಆಚರಣೆ ಭಾಗವಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಕೆಯಾಗಿದೆ.