ಬೆಂಗಳೂರು: ಪಬ್ಲಿಕ್ ಟಿವಿಯ ವಿದ್ಯಾಪೀಠ ಶೈಕ್ಷಣಿಕ ಮೇಳದ 4ನೇ ಆವೃತ್ತಿಗೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಾವಿರಾರು ವಿದ್ಯಾರ್ಥಿಗಳು, ಪೋಷಕರು ಅರಮನೆ ಮೈದಾನದ ಗಾಯತ್ರಿ ವಿಹಾರಕ್ಕೆ ಧಾವಿಸಿ ಮಾಹಿತಿ ಪಡೆದ್ರು.
Advertisement
ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುತ್ತಿರುವ ಶೈಕ್ಷಣಿಕ ಮೇಳಕ್ಕೆ ಸಾವಿರಾರು ವಿದ್ಯಾರ್ಥಿಗಳು, ಪೋಷಕರು ಧಾವಿಸಿದ್ರು. ಭವಿಷ್ಯದ ಶಿಕ್ಷಣದ ಕುರಿತಾಗಿ ಮಾಹಿತಿ ಪಡೆದುಕೊಂಡ್ರು. ಬೆಳಗ್ಗೆ 10.30ಕ್ಕೆ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್. ರಂಗನಾಥ್ ಮತ್ತು ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ವಿದ್ಯಾಪೀಠಕ್ಕೆ ಚಾಲನೆ ನೀಡಿದ್ರು.
Advertisement
Advertisement
ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್.ಆರ್. ರಂಗನಾಥ್ ರವರು ವಿದ್ಯಾಪೀಠದ ಮಹತ್ವದ ಬಗ್ಗೆ ಮಾಹಿತಿ ನೀಡಿದ್ರು. ಇದಾದ ಬಳಿಕ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಖುದ್ದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಮಾಹಿತಿ ನೀಡಿದ್ರು. ರಾಷ್ಟ್ರೀಯ ಶಿಕ್ಷಣ ನೀತಿ (NEP) ಬಗ್ಗೆ ಜನಸಾಮಾನ್ಯರಿಗೆ ಇರುವ ಗೊಂದಲ, ಅನುಮಾನಗಳ ಕುರಿತಾಗಿ ಹೆಚ್.ಆರ್ ರಂಗನಾಥ್ ಕೇಳಿದ ಪ್ರಶ್ನೆಗಳಿಗೆ ಸಚಿವ ಅಶ್ವಥ್‍ನಾರಾಯಣ್ ಉತ್ತರಿಸಿದ್ರು. ವಿದ್ಯಾರ್ಥಿಗಳು, ಪೋಷಕರ ಗೊಂದಲ ನಿವಾರಿಸಿದ್ರು
Advertisement
ಮಧ್ಯಾಹ್ನದ ಬಳಿಕ ಖ್ಯಾತ ನಟ ರಮೇಶ್ ಅರವಿಂದ್, ಮೋಟಿವೇಶನ್ ಸ್ಪೀಚ್ ನೀಡಿದ್ರು. ಯಶೋಸೂತ್ರದ ಬಗ್ಗೆ ರಮೇಶ್ ಅರವಿಂದ ನೀಡಿದ ಉಪನ್ಯಾಸಕ್ಕೆ ಸಾವಿರಾರು ವಿದ್ಯಾರ್ಥಿಗಳು ಫಿದಾ ಆದ್ರು. ಬಳಿಕ ನ್ಯೂ ಏಜ್ ಪ್ರೋಗ್ರಾಂ ಕುರಿತು ಚರ್ಚಾ ಕಾರ್ಯಕ್ರಮ ನಡೀತು. ವಿದ್ಯಾಪೀಠ ಕಾರ್ಯಕ್ರಮದಲ್ಲಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಲಾಗಿತ್ತು. ಇದನ್ನೂ ಓದಿ: ನಿರುದ್ಯೋಗ ದಿನ ಆಚರಿಸಿ ಪಿಎಂಗೆ ನಿಮ್ಮ ಪದವಿ ಪ್ರಮಾಣ ಪತ್ರ ಹಿಂದಿರುಗಿಸಿ: ಡಿ.ಕೆ. ಶಿವಕುಮಾರ್ ಕರೆ
ವಿದ್ಯಾಪೀಠ ಎಜುಕೇಶನ್ ಫೇರ್‍ನಲ್ಲಿ 58ಕ್ಕೂ ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಭಾಗವಹಿಸಿವೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸ್ಥೆಗಳ ಮುಖ್ಯಸ್ಥರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾಳೆ ಕೂಡಾ ವಿದ್ಯಾಪೀಠ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಪ್ರಾರಂಭ ಆಗಲಿದ್ದು, ಮೊದಲ ದಿನದಂತೆ ವಿಶೇಷ ಕಾರ್ಯಕ್ರಮಗಳು ನಡೆಯಲಿದೆ. ಪ್ರವೇಶ ಉಚಿತ ಬನ್ನಿ ಭಾಗವಹಿಸಿ. ಇದನ್ನೂ ಓದಿ: ರವಿಶಾಸ್ತ್ರಿ ಬಳಿಕ ಟೀಂ ಇಂಡಿಯಾಕ್ಕೆ ಕನ್ನಡಿಗ ಕೋಚ್?