ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ (Ayodhya Ram Mandir) ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೊರತುಪಡಿಸಿ ಬೇರೆ ಯಾವ ಸಿಎಂಗಳಿಗೂ ಆಹ್ವಾನ ನೀಡಿಲ್ಲ ಎಂಬ ಮಾಹಿತಿಯೊಂದು ವರದಿಯಾಗಿದೆ.
Advertisement
ಹೌದು. ಜನವರಿ 22 ರಂದು ದೇಶಾದ್ಯಂತ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ದಲಿತ ಪ್ರಮುಖರು, ಕರಸೇವಕರು ಹಾಗೂ ಹಲವಾರು ಗಣ್ಯ ವ್ಯಕ್ತಿಗಳ ಕುಟುಂಬಗಳನ್ನು ಕೂಡ ಈ ಬೃಹತ್ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ. ಅಂತೆಯೇ ಯೋಗಿ ಆದಿತ್ಯನಾಥ್ ಅವರಿಗೆ ಮಾತ್ರ ಆಮಂತ್ರಣ ನೀಡಲಾಗಿದ್ದು, ಬೇರೆ ಯಾವುದೇ ಮುಖ್ಯಮಂತ್ರಿಗಳಿಗೆ ಸರ್ಕಾರ ಆಹ್ವಾನವನ್ನು ಕಳುಹಿಸಿಲ್ಲ. ಜೊತೆಗೆ ಕೇಂದ್ರ ಸಚಿವರುಗಳು, ರಾಜ್ಯ ಸಚಿವರುಗಳು ಹಾಗೂ ಕೆಲ ರಾಜಕೀಯ ಗಣ್ಯರಿಗೂ ಆಹ್ವಾನ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೀವನದಲ್ಲಿ ಮೊದಲ ಬಾರಿಗೆ ಭಾವುಕನಾಗಿದ್ದೇನೆ – 11 ದಿನಗಳ ವ್ರತ ಆರಂಭಿಸಿದ ಮೋದಿ
Advertisement
Advertisement
ಜನವರಿ 22 ರಂದು ನಡೆಯಲಿರುವ ಸಮಾರಂಭಕ್ಕೆ ಆಹ್ವಾನಿತರಲ್ಲಿ ದಲಿತ ಐಕಾನ್‌ಗಳಾದ ಬಿಆರ್ ಅಂಬೇಡ್ಕರ್, ಜಗಜೀವನ್ ರಾಮ್, ಕಾನ್ಶಿರಾಮ್ ಅವರ ಕುಟುಂಬದ ಸದಸ್ಯರು ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುವ ಕಾರ್ಯಕ್ರಮಕ್ಕೆ ರಾಮ ಜನ್ಮಭೂಮಿ ಆಂದೋಲನದ ಸಮಯದಲ್ಲಿ ಮಡಿದ ಕರಸೇವಕರ ಕುಟುಂಬ ಸದಸ್ಯರಿಗೂ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ 11 ದಿನಗಳ ವ್ರತದ ಮಹತ್ವ ಏನು?
Advertisement
ಸುಪ್ರೀಂ ಕೋರ್ಟ್‌ನ ಮೂವರು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು, ಸೇನೆ, ನೌಕಾಪಡೆ ಮತ್ತು ವಾಯುಪಡೆಯ ನಿವೃತ್ತ ಮುಖ್ಯಸ್ಥರು, ಮಾಜಿ ರಾಯಭಾರಿಗಳು, ಉನ್ನತ ಅಧಿಕಾರಿಗಳು, ಐಪಿಎಸ್ ಅಧಿಕಾರಿಗಳು, ನೋಬೆಲ್ ಪ್ರಶಸ್ತಿಯಿಂದ ಗೌರವಿಸಲ್ಪಟ್ಟ ಸಹೋದರ ಸಹೋದರಿಯರು ಆಹ್ವಾನಿತರ ಪಟ್ಟಿಯಲ್ಲಿ ಇದ್ದಾರೆ.
ರಾಮಮಂದಿರ ಕಾರ್ಯಕ್ರಮದ ಆಹ್ವಾನಗಳು ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಅಧೀರ್ ರಂಜನ್ ಚೌಧರಿ ಅವರು ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿಯವರು ಕಿಡಿಕಾರಿದ್ದಾರೆ.