ಕೋಲಾರ: ಸರ್ಕಾರದ ಖಜಾನೆ ಖಾಲಿಯಾಗಿದ್ದು, ಮುಖ್ಯಮಂತ್ರಿಗಳಿಗೆ ಮದ್ಯದಂಗಡಿಗಳನ್ನ ತೆರೆಯುವ ಒಲವಿದೆ ಎಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್.ನಾಗೇಶ್ ಹೇಳಿದ್ದಾರೆ.
ಕೋಲಾರದ ಜಿಲ್ಲಾಪಂಚಾಯತಿ ಬಳಿ ಮಾತನಾಡಿದ ಸಚಿವ ನಾಗೇಶ್ ಅವರು, ಮೇ 3ರ ನಂತರ ಮದ್ಯದಂಗಡಿಗಳನ್ನ ತೆರೆಯುವ ಮುನ್ಸೂಚನೆಯನ್ನು ನೀಡಿದರು.
Advertisement
Advertisement
ಕೊರೊನಾ ಕಾರಣದಿಂದ ಸರ್ಕಾರಿ ಅಧಿಕಾರಗಳ ವೇತನ ನೀಡುವುದು ಸೇರಿದಂತೆ ಯೋಜನೆಗಳಿಗೆ ಹಣ ನೀಡಲು ಸರ್ಕಾರಕ್ಕೆ ತುಂಬಾ ಹೊರೆಯಾಗಿದೆ. ಸರ್ಕಾರದ ಖಜಾನೆ ಖಾಲಿಯಾಗಿರುವ ಕಾರಣ ಮುಖ್ಯಮಂತ್ರಿಗಳು ಮದ್ಯದಂಗಡಿಗಳನ್ನು ತೆರೆಯುವ ಒಲವನ್ನು ಹೊಂದಿದ್ದಾರೆ. ಆದರೆ ಸದ್ಯ ವಿಶ್ವದಲ್ಲಿಯೇ ಪ್ರಧಾನಿ ಮೋದಿ ಅವರು ನಂಬರ್ ಒನ್ ಆಗಿದ್ದು. ಇಂದಿನ ಸಭೆಯಲ್ಲಿ ಮೋದಿ ಏನು ಹೇಳಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆದ್ದರಿಂದ ಸಿಎಂ ಅವರೊಂದಿಗೆ ಚರ್ಚೆ ನಡೆಸಿ ಮೋದಿ ಅವರ ಸೂಚನೆ ಮೇರೆಗೆ ಮದ್ಯದಂಗಡಿಗಳು ತೆರೆಯುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದರು.
Advertisement
ಪಂಜಾಬ್ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯುವುದಕ್ಕೆ ಅಲ್ಲಿನ ಸರ್ಕಾರ ಮನವಿ ಮಾಡಿತ್ತು. ಆದರೆ ಅವರ ಮನವಿಯನ್ನು ಪ್ರಧಾನಿಗಳು ನಿರಾಕರಿಸಿದ್ದಾರೆ. ನಾನು ಕೂಡ ಕಳೆದ ಕ್ಯಾಬಿನೆಟ್ ಸಭೆಯ ಬಳಿಕ ಸಿಎಂ ಅವರೊಂದಿಗೆ ಪ್ರತ್ಯೇಕವಾಗಿ ಚರ್ಚೆ ನಡೆಸಿ ಗಮನಕ್ಕೆ ತಂದಿರುವುದಾಗಿ ತಿಳಿಸಿದರು.
Advertisement
ಉಳಿದಂತೆ ಮದ್ಯದಂಗಡಿಗಳಲ್ಲಿ ಸ್ಟಾಕ್ ಪರಿಶೀಲನೆ ಮಾಡಲಾಗುತ್ತಿದೆ. ಸ್ಟಾಕ್‍ನಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇತ್ತ ಬಾರ್ ಗಳ ಕಳ್ಳತನ ಹೆಚ್ಚಾಗಿದ್ದು, ದಿನ ನಿತ್ಯ ಇಂತಹ ಪ್ರಕರಣಗಳು ವರದಿಯಾಗುತ್ತಿದೆ. ಪೊಲೀಸರು ಈ ಕುರಿತು ಕ್ರಮಕೈಗೊಳ್ಳುತ್ತಾರೆ ಎಂದು ತಿಳಿಸಿದರು.