ಬೆಂಗಳೂರು: ಮದ್ಯ ಮಾರಾಟಗಾರರ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
Advertisement
ಅಬಕಾರಿ ಆಯುಕ್ತರ ಕಚೇರಿಯಲ್ಲಿಂದು ಫೆಡರೇಷನ್ ಆಪ್ ವೈನ್ ಮರ್ಚಂಟ್ಸ್‌ಗಳ ಕೋರಿಕೆ ಹಿನ್ನೆಲೆಯಲ್ಲಿ ನಡೆದ ಇ-ಇಂಡೆಂಟಿಂಗ್ ನಿಂದ ಉಂಟಾಗಿರುವ ಸಮಸ್ಯೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮದ್ಯ ಮಾರಾಟಗಾರರು ಕಳೆದ ಒಂದೆರಡು ತಿಂಗಳಿನಿಂದ ಎದುರಿಸುತ್ತಿರುವ ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ನಮ್ಮಲ್ಲಿ ಪೆಟ್ರೋಲ್ ಮುಗಿದಿದೆ: ಶ್ರೀಲಂಕಾ
Advertisement
Advertisement
ಇ-ಇಂಡೆಂಟಿಂಗ್ ಸಮಸ್ಯೆ ಕುರಿತು ಮದ್ಯ ಮಾರಾಟಗಾರರು ನನ್ನ ಗಮನಕ್ಕೆ ತಂದಾಗ ತಕ್ಷಣವೇ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಾಗಿದೆ. ಇಲಾಖೆ ಸಚಿವನಾಗಿ ಸಮಸ್ಯೆಯ ಗಂಭೀರತೆಯನ್ನು ಅರಿತಿದ್ದೇನೆ. ಇದಾದ ನಂತರ ನಡೆದ ಎಲ್ಲ ಬೆಳವಣಿಗೆಗಳನ್ನು ಗಮನಿಸಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
Advertisement
ಸಭೆಯಲ್ಲಿ ಉಪಸ್ಥಿತರಿದ್ದ ಫೆಡರೇಷನ್ ಆಪ್ ವೈನ್ ಮರ್ಚಂಟ್ಸ್ ಅಧ್ಯಕ್ಷ ಗೋವಿಂದರಾಜ್ ಹೆಗಡೆ ಮಾತನಾಡಿ, ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಫ್ತಿಗೆ ನಿಷೇಧ ಹೇರಿದ ಭಾರತ- ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ
ಈ ಸಂದರ್ಭದಲ್ಲಿ ರಾಜ್ಯ ಪಾನೀಯ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಾಫರ್, ಇಡಿಒ ರಾಜೇಂದ್ರ ಪ್ರಸಾದ್, ಡಾ.ರವಿಶಂಕರ್ ಉಪಸ್ಥಿತರಿದ್ದರು.