ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ (Excise Policy Case) ಜಾಮೀನು (Bail) ಪಡೆದ ಕೆಲವೇ ಗಂಟೆಗಳ ನಂತರ ಜಾರಿ ನಿರ್ದೇಶನಾಲಯ (ED) ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ದೆಹಲಿ ಜಲಮಂಡಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾನುವಾರ ಮತ್ತೊಂದು ಸಮನ್ಸ್ (Summons) ಜಾರಿ ಮಾಡಿದೆ.
ಹಿಂದಿನ ಸಮನ್ಸ್‌ಗಳನ್ನು ಕಾನೂನುಬಾಹಿರ ಎಂದು ಕರೆದಿದ್ದ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಎರಡು ದೂರುಗಳನ್ನು ನೀಡಿತ್ತು. ಶನಿವಾರ ಇ.ಡಿ ನೀಡಿದ ದೂರಿನ ವಿಚಾರಣೆಗಾಗಿ ಅರವಿಂದ್ ಕೇಜ್ರಿವಾಲ್ ಶನಿವಾರ ರೋಸ್ ಅವೆನ್ಯೂ ಕೋರ್ಟ್‌ಗೆ ಹಾಜರಾಗಿದ್ದರು. ಈ ಪ್ರಕರಣದಲ್ಲಿ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ 15,000 ರೂ. ಮೌಲ್ಯದ ಶ್ಯೂರಿಟಿ ಬಾಂಡ್ ಹಾಗೂ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಶನಿವಾರ ಜಾಮೀನು ಮಂಜೂರು ಮಾಡಿತ್ತು. ಇದನ್ನೂ ಓದಿ: ಕಾಂಗ್ರೆಸ್ ಇಲ್ಲದೇ ಇದ್ದಿದ್ರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ: ಸಂಜಯ್ ರಾವತ್
- Advertisement
ಒಂಬತ್ತನೇ ಸಮನ್ಸ್‌ನಲ್ಲಿ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ಕೇಜ್ರಿವಾಲ್ ಹಾಜರಾಗುವಂತೆ ತನಿಖಾ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ನೀಡಿದ ಗಾಯಕ ಸಿಧು ಮೂಸೆವಾಲಾ ತಾಯಿ
- Advertisement