ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳಲ್ಲಿ (Exit Polls) ನನಗೆ ನಂಬಿಕೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಬಹುತೇಕ ಸಮೀಕ್ಷೆಗಳು ಕರ್ನಾಟಕದಲ್ಲಿ (Karnataka) ಬಿಜೆಪಿ, ಜೆಡಿಎಸ್ ಮೈತ್ರಿಕೂಟ 20+ ಸ್ಥಾನ ಗೆಲ್ಲಬಹುದು ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಶಿವಕುಮಾರ್ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಯಾವುದೇ ಎಕ್ಸಿಟ್ ಪೋಲ್ ಬಗ್ಗೆ ನಂಬಿಕೆ ಇಲ್ಲ ಎಂದು ನಾನು ಮೊದಲೇ ಹೇಳೀದ್ದೇನೆ. ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಡಬಲ್ ಡಿಜಿಟ್ ದಾಟುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: Exit Polls – ಕೇರಳದಲ್ಲೂ ಖಾತೆ ತೆರೆಯಲಿದೆ ಬಿಜೆಪಿ
ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದರು. ಇದನ್ನೂ ಓದಿ: Exit Polls: ಕರ್ನಾಟಕದಲ್ಲಿ 20 ರ ಗಡಿ ದಾಟಿದ ಬಿಜೆಪಿ – ಕಾಂಗ್ರೆಸ್‌ಗೆ ಎಷ್ಟು?
ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು INDIA ಮೈತ್ರಿಕೂಟ ಪಡೆಯಲಿದೆ ಎಂದು ಹೇಳಿದರು.