ಬೆಂಗಳೂರು: ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳಿದೆ, ಇವಿಎಂನ್ನು ಎಳೆತಂದಿದ್ದು ಸರಿಯಲ್ಲ ಎಂದು ಶಾಸಕ ಸುಧಾಕರ್ ಸಿಎಂ ಕುಮಾರಸ್ವಾಮಿ ಅವರನ್ನು ಗುರಿ ಇಟ್ಟುಕೊಂಡು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸುಧಾಕರ್, “ಎಕ್ಸಿಟ್ ಪೋಲ್ ಫಲಿತಾಂಶದ ಬಗ್ಗೆ ಮಾತನಾಡುವಾಗ ಇವಿಎಂ ವಿಷಯ ಬಗ್ಗೆ ಯಾಕೆ ಚರ್ಚಿಸುತ್ತಿದ್ದಾರೆ ಎಂಬುದು ನನಗೆ ಗೊತ್ತಾಗುತ್ತಿಲ್ಲ. ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳಿವೆ” ಎಂದು ಹೇಳಿದ್ದಾರೆ.
Advertisement
Personally I am confused why the issue of EVM manipulation is being brought into conversation while talking about the exit poll results. When in fact the exit poll results indicate the feeling of the voter at the conclusion of polling. pic.twitter.com/OwuWkAnD5M
— Dr Sudhakar K (@mla_sudhakar) May 21, 2019
Advertisement
ಇತ್ತೀಚೆಗೆ ಕುಮಾರಸ್ವಾಮಿ, “ಚುನಾವಣೋತ್ತರ ಸಮೀಕ್ಷೆಗಳು ಕೇವಲ ಒಂದು ಪಕ್ಷ ಹಾಗೂ ವ್ಯಕ್ತಿ ಪರ ಸುಳ್ಳು ವರದಿ ತೋರಿಸುತ್ತಿದೆ. ಇದು ಎಕ್ಸಿಟ್ ಪೋಲ್ ಅಷ್ಟೇ ಹೊರತು ಎಕ್ಸಾಟ್ ಪೋಲ್ ಅಲ್ಲ” ಎಂದು ಟ್ವೀಟ್ ಮೂಲಕ ಮಾಧ್ಯಮಗಳ ಸಮೀಕ್ಷೆಯ ಬಗ್ಗೆ ಕಿಡಿಕಾರಿದ್ದರು.
Advertisement
Entire Opposition political parties had expressed concern over credibility of EVMs under PM @narendramodi's rule.
Opposition parties even knocked the doors of the Supre Court asking for a traditional ballet paper elections to avoid defective EVMs that are vulnerable to fraud.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 20, 2019
Advertisement
ಸಿಎಂ ಟ್ವೀಟ್ ನಲ್ಲೇನಿತ್ತು?:
ಎಲ್ಲಾ ವಿರೋಧ ಪಕ್ಷಗಳು ಕೂಡ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಇವಿಎಂ ಮತಯಂತ್ರದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಿರೋಧ ಪಕ್ಷಗಳ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ. ಅಭಿವೃದ್ಧಿ ಹೊಂದಿದ ದೇಶಗಳೇ ಬ್ಯಾಲೆಟ್ ಪೇಪರ್ ಗಳನ್ನು ಆಯ್ಕೆ ಮಾಡುತ್ತಿದ್ದಾರೆ. 2019 ಎಕ್ಸಿಟ್ ಪೋಲ್ ಸಂಪೂರ್ಣವಾಗಿ ಆಡಳಿತ ಪಕ್ಷದ ಪರವಾಗಿ ಇದೆ. ಇವಿಎಂಗಳನ್ನು ಇಲ್ಲಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದರು.
World wide, even developed countries have opted for traditional polls through paper ballets.
The exit poll surveys on May 19 only reiterated the serious concern of the Opposition parties on misuse of vulnerabke EVMs for electoral gains by the ruling party.
2/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 20, 2019
ಎಕ್ಸಿಟ್ ಪೋಲ್ ದೇಶದಲ್ಲಿ ಮೋದಿ ಅಲೆ ಇದೆ ಎಂದು ತೋರಿಸಲು ಅಷ್ಟೆ. ತಾತ್ಕಾಲಿಕ, ಕಾಲ್ಪನಿಕ ಮೋದಿ ಅಲೆ ಹೆಚ್ಚು ದಿನ ಇರಲ್ಲ. ಬಹುಮತದ ಕೊರತೆಯಾದರೆ ಪ್ರಾದೇಶಿಕ ಪಕ್ಷ ಸೆಳೆಯಲು ಯತ್ನ ಮಾಡಲಾಗುತ್ತೆ. ಎಕ್ಸಿಟ್ ಪೋಲ್ ಮೂಲಕ ಪ್ರಾದೇಶಿಕ ಪಕ್ಷಗಳನ್ನು ಸೆಳೆಯುವ ಯತ್ನ ಮಾಡಲಾಗುತ್ತಿದೆ. ಬಿಜೆಪಿ ಎಕ್ಸಿಟ್ ಪೋಲ್ ಮೂಲಕ ವೇದಿಕೆ ಸಿದ್ಧಪಡಿಸುತ್ತಿದೆ. ಇದು ಎಕ್ಸಿಟ್ ಪೋಲ್ ಅಷ್ಟೇ. ಎಕ್ಸಾಟ್ ಪೋಲ್ ಅಲ್ಲ ಎಂದು ಬರೆದು ಎಚ್.ಡಿ ದೇವೇಗೌಡ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಬಿಎಸ್‍ಪಿ ಹಾಗೂ ಎಕ್ಸಿಟ್ ಪೋಲ್ 2019 ಹ್ಯಾಷ್‍ಟ್ಯಾಗ್ ಹಾಕಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದರು.
Exit polls are being used to create an impression that there is still a Modi wave in the country.
This artificially engineered or manufacutred Modi wave is being used by the BJP to lure regional parties well in advance to fill any shortfall after the results on May 23.
3/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 20, 2019
The entire exit poll exercise was an effort to create false impression of a wave in favour of one particular leader and the party. As they say, it is just an exit poll, not exact poll. 4/4 @H_D_Devegowda@ncbn @MamataOfficial @yadavakhilesh @RahulGandhi #BSP #ExitPoll2019
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 20, 2019