ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಶಾಕ್ ಕೊಟ್ಟಿದೆ.
ಟೋಲ್‌ನಿಂದ (Toll) ಎಸ್ಕೇಪ್ ಆಗುವುದನ್ನ ತಪ್ಪಿಸಲು ಬಿಡದಿ ಬಳಿಯ ನಿರ್ಗಮನ ರಸ್ತೆ ಬಂದ್ ಮಾಡಿದೆ. ಈ ಮೂಲಕ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಇದ್ದ ಸಂಪರ್ಕವನ್ನು ಕಡಿತಗೊಳಿಸಿದೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ 3 ಸಾವಿರಕ್ಕೆ ವಾರ್ಷಿಕ, 30 ಸಾವಿರಕ್ಕೆ ಜೀವಿತಾವಧಿ ಟೋಲ್ ಪಾಸ್
ಮೈಸೂರಿನಿಂದ ಬರುತ್ತಿದ್ದ ವಾಹನ ಸವಾರರು ಬಿಡದಿಯಿಂದ ಮುಂದೆ ಸರ್ವೀಸ್ ರಸ್ತೆಗೆ ಇಳಿದು ಟೋಲ್ ತಪ್ಪಿಸಿಕೊಳ್ಳುತ್ತಿದ್ದರು. ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸಿ ಶೇಷಗಿರಿಹಳ್ಳಿ ಬಳಿ ಟೋಲ್ ಕಟ್ಟದೇ ಸರ್ವೀಸ್ ರಸ್ತೆ ಮೂಲಕ ಬೆಂಗಳೂರು ತಲುಪುತ್ತಿದ್ದರು. ಹೀಗಾಗಿ ಟೋಲ್ ತಪ್ಪಿಸುವ ವಾಹನಗಳಿಗೆ ಕಡಿವಾಣ ಹಾಕಲು ಹೆದ್ದಾರಿ ಪ್ರಾಧಿಕಾರ ಎಂಟ್ರಿಗೆ ಅವಕಾಶ ಕೊಟ್ಟು, ಎಕ್ಸಿಟ್ ರಸ್ತೆಯನ್ನು ಬಂದ್ ಮಾಡಿದೆ. ಇದನ್ನೂ ಓದಿ: ಗೌತಮ್ ಅದಾನಿ ಪುತ್ರನ ವಿವಾಹ ಪ್ರತಿಜ್ಞೆ – ಪ್ರತಿ ವರ್ಷ 500 ಅಂಗವಿಕಲ ಹೆಣ್ಣುಮಕ್ಕಳ ವಿವಾಹಕ್ಕೆ 10 ಲಕ್ಷ ನೆರವು ಘೋಷಣೆ
ಹೆದ್ದಾರಿ ಪ್ರಾಧಿಕಾರದ ನಡೆಗೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಸೂಚನಾ ಫಲಕವನ್ನೂ ಅಳವಡಿಸದೇ ಏಕಾಏಕಿ ಎಕ್ಸಿಟ್ ರಸ್ತೆಯನ್ನು ಬಂದ್ ಮಾಡಿರುವುದು ಸರಿಯಲ್ಲ. ರಾಮನಗರದಿಂದ ಬೆಂಗಳೂರಿಗೆ ಹೋಗೋದಕ್ಕೂ ದುಬಾರಿ ಟೋಲ್ ಕಟ್ಟಬೇಕಾ ಎಂದು ಪ್ರಶ್ನೆ ಮಾಡಿದ್ದಾರೆ.
ಶೀಘ್ರವೇ ವಾರ್ಷಿಕ, ಜೀವಿತಾವಧಿ ಟೋಲ್ ಪಾಸ್:
ಇನ್ನೂ ಟೋಲ್ ಸಂಗ್ರಹದಲ್ಲಿ ಉಂಟಾಗುತ್ತಿದ್ದ ಕಿರಿಕಿರಿ ತಪ್ಪಿಸಲು ಹಾಗೂ ಕಾರು ಮಾಲೀಕರಿಗೆ ಅನುಕೂಲ ಮಾಡಿಕೊಡಲು ʻವಾರ್ಷಿಕ ಟೋಲ್ ಪಾಸ್ʼ ವ್ಯವಸ್ಥೆಯ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಚಿಂತನೆ ನಡೆಸಿದೆ. ಅದರಂತೆ ಒಮ್ಮೆಲೆ 3,000 ರೂ. ಪಾವತಿಸಿ ಒಂದು ವರ್ಷದಲ್ಲಿ ಎಷ್ಟು ಬಾರಿ ಬೇಕಾದರೂ ಟೋಲ್‌ಗಳಲ್ಲಿ ಸಂಚಾರ ಮಾಡಬಹುದು. 30,000 ರೂ. ಪಾವತಿಸಿದ್ರೆ ʻಜೀವಮಾನದ ಪಾಸ್ʼ ಒದಗಿಸುವ ಸಾಧ್ಯತೆಯೂ ಇದೆ. 30,000 ರೂ.ಗಳ ಪಾಸ್ ಪಡೆದರೆ 15 ವರ್ಷಗಳವರೆಗೆ ಟೋಲ್‌ಗಳಲ್ಲಿ ಸಂಚಾರಕ್ಕೆ ಅವಕಾಶ ಇರಲಿದೆ ಎಂದು ಮೂಲಗಳು ತಿಳಿಸಿವೆ.