ಕೊಪ್ಪಳ: ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ (81) ಇಂದು ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಕಳೆದ ಒಂದು ತಿಂಗಳಿನಿಂದ ಬಳಲುತ್ತಿದ್ದ ವಿರುಪಾಕ್ಷಪ್ಪ ಅಗಡಿ ಅವರು ಕೊಪ್ಪಳದ ಕಲ್ಯಾಣ ನಗರದ ಮನೆಯಲ್ಲಿ ಮೃತಪಟ್ಟಿದ್ದಾರೆ.
Advertisement
Advertisement
1985-1989 ರವರೆಗೆ ಜನತಾ ಪಾರ್ಟಿಯಿಂದ ಶಾಸಕರಾಗಿದ್ದ ವಿರುಪಾಕ್ಷಪ್ಪ ಅಗಡಿ, ಎಸ್ ಆರ್ ಬೊಮ್ಮಾಯಿ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು. ಕೇವಲ ಒಂದು ವಾರದ ಸಚಿವರಾಗಿದ್ದ ಅಗಡಿಯವರು, 1989 ರಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು. ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ನೀಡಿದ್ದಕ್ಕೆ ಪೆಟ್ರೋಲ್ ಬೆಲೆ ಹೆಚ್ಚಳ: ಸಚಿವ ತೇಲಿ
Advertisement
Advertisement
1998ರಲ್ಲಿ ಲೋಕಶಕ್ತಿ ಪಕ್ಷದಿಂದ, 2004ರಲ್ಲಿ ಜೆಡಿಎಸ್ ನಿಂದ ಲೋಕಸಭೆಗೆ ಸ್ಪರ್ಧಿಸಿದ್ದರು. ಇದೀಗ ಅವರು ಮೂವರು ಮಕ್ಕಳನ್ನು ಅಗಲಿದ್ದಾರೆ. ಸಂಜೆ 4 ಗಂಟೆಗೆ ಕೊಪ್ಪಳದ ವೀರಶೈವ ರುಧ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಕಲ್ಯಾಣನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ನಂಗೆ ಇಂಜೆಕ್ಷನ್ ಬೇಡ, ನನ್ನ ಮಕ್ಕಳಿಗೆ ಅನ್ನ ಮಾಡಿಕೊಡೋರು ಯಾರೂ ಇಲ್ಲ- ಲಸಿಕೆ ಹೈಡ್ರಾಮ