ಬೆಂಗಳೂರು: ನಗರದಲ್ಲಿ ಕೊರೊನಾದಿಂದಾಗಿ ನೈಟ್ ಕರ್ಫ್ಯೂ ವಿಧಿಸಲಾಗಿತ್ತು. ಇದರಿಂದ ಮೆಟ್ರೋ ಸೇವೆಗೆ ಅವಧಿ ನಿಗದಿ ಪಡಿಸಿತ್ತು. ಆದರೆ ಇದೀಗ ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯ ಅವಧಿ ವಿಸ್ತರಣೆಗೊಂಡಿದೆ.
Advertisement
ಈ ಕುರಿತಂತೆ ಬಿಎಂಆರ್‌ಸಿಎಲ್(BMRCL) ಆದೇಶ ಹೊರಡಿಸಿದ್ದು, ನಗರದಲ್ಲಿ ಮೆಟ್ರೋ ರೈಲು ಸಂಚಾರ ಸೇವೆಯು ಸೆಪ್ಟೆಂಬರ್ 18ರ ಶನಿವಾರದಿಂದ ಬೆಳಗ್ಗೆ 6ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಇರಲಿದೆ ಎಂಬುದಾಗಿ ತಿಳಿಸಿದೆ. ಇದನ್ನೂ ಓದಿ: ಸರ್ಕಾರದಿಂದ್ಲೇ ಹುಚ್ಚಗಣಿ ದೇವಸ್ಥಾನ ಪುನರ್ ನಿರ್ಮಾಣ- ಸಂಪುಟ ಸಭೆಯಲ್ಲಿ ತೀರ್ಮಾನ ನಿರೀಕ್ಷೆ
Advertisement
Advertisement
ಮೆಜೆಸ್ಟಿಕ್‍ನ ಕೆಂಪೇಗೌಡ ಮೆಟ್ರೋ ನಿಲ್ದಾಣ, ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳಿಂದ ರಾತ್ರಿ 9.30ಕ್ಕೆ ಕೊನೆಯ ಮೆಟ್ರೋ ರೈಲು ಹೊರಡಲಿದೆ. ಜೊತೆಗೆ ಬೆಳಿಗ್ಗೆ 7ರ ಬದಲಾಗಿ 6 ಗಂಟೆಯಿಂದಲೇ ಮೆಟ್ರೋ ರೈಲು ಸೇವೆ ಆರಂಭಗೊಳ್ಳಲಿದೆ. ರಾತ್ರಿ 9 ಗಂಟೆಗೆ ಕೊನೆಗೊಳ್ಳುತ್ತಿದ್ದಂತ ಮೆಟ್ರೋ ರೈಲು ಸಂಚಾರ ನಾಳೆಯಿಂದ ಬೆಳಗ್ಗೆ 6 ರಿಂದ ರಾತ್ರಿ 10ರವರೆಗೆ ಪ್ರಯಾಣಿಕರ ಸೇವೆಗೆ ಲಭ್ಯವಾಗಲಿದೆ. ಇದನ್ನೂ ಓದಿ: ಹಾಸನದಲ್ಲಿ ಲಘು ಭೂಕಂಪನ- ರಿಕ್ಟರ್ ಮಾಪನದಲ್ಲಿ 2.3 ತೀವ್ರತೆ ದಾಖಲು
Advertisement