ಭೂಕಂಪನ ಪೀಡಿತ ಪ್ರದೇಶಗಳಿಗೆ ಹಿರಿಯ ವಿಜ್ಞಾನಿಗಳ ಭೇಟಿ ಅಧ್ಯಯನ

Public TV
3 Min Read
chickballapur 11

ಚಿಕ್ಕಬಳ್ಳಾಪುರ: ನಗರದ ಭೂಕಂಪನ ಪೀಡಿತ ಪ್ರದೇಶಗಳಿಗೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹಿರಿಯ ವಿಜ್ಞಾನಿಗಳಾದ ರಮೇಶ್ ದಿಕ್ಪಾಲ್ ಮತ್ತು ಸಂತೋಷ್ ಕುಮಾರ್ ಭೇಟಿ ನೀಡಿ ಅಧ್ಯಯನ ನಡೆಸಿದ್ದಾರೆ.

chick ballapur 33

ಡಿಸೆಂಬರ್ ೨೩ ರಂದು ಮಧ್ಯಾಹ್ನ ೨:೧೬ ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ ೩.೬ ರಷ್ಟು ತೀವ್ರತೆ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಹಿರಿಯ ವಿಜ್ಞಾನಿಗಳು ಚಿಕ್ಕಬಳ್ಳಾಪುರ ತಾಲ್ಲೂಕಿನ ಬಂಡಹಳ್ಳಿ, ಗುಂಡ್ಲ, ಮಂಡಿಕಲ್ಲು, ಜೊನ್ನಲಕುಂಟೆ, ಪಿಲ್ಲಗುಂಡ್ಲಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ:  ಮಕ್ಕಳಿಗೆ ಐಸ್ ಕ್ರೀಂ ನೀಡದ್ದಕ್ಕೆ ಅಂಗಡಿ ಮೇಲೆ ದಾಳಿ ಮಾಡಿದ ತಂದೆ

chick ballapur incident

ಈ ವೇಳೆ ರಮೇಶ್ ದಿಕ್ಪಾಲ್ ರವರು ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಸುರಿದ ಅತಿವೃಷ್ಟಿ ಧಾರಾಕಾರ ಮಳೆಯು ಕಳೆದ ೫೦ ವರ್ಷಗಳಲ್ಲಿಯೇ ಆಗಿರುವುದಿಲ್ಲ. ಈ ಮಹಾಮಳೆಯಿಂದ ಅಂತರ್ಜಲದಲ್ಲಿ ಬದಲಾವಣೆಯಾಗಿದೆ. ಭೂಮಿಯ ಆಳಕ್ಕೆ ನೀರು ನುಸುಳುತ್ತಿದೆ. ಹೀಗಾಗಿ ಈ ರೀತಿಯ ಭೂಕಂಪನಗಳು ಈ ಭಾಗದಲ್ಲಿ ಸಂಭವಿಸಿವೆ. ಇಂತಹ ಭೂಕಂಪನ ಅಲೆಗಳು ಬಾರಿ ಸದ್ದಿನೊಂದಿಗೆ ಮುಂದಿನ ಒಂದು ತಿಂಗಳವರೆಗೂ ಬರುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರು.

earthquake 1 2

ಜಿಲ್ಲೆಯು ಭೂಕಂಪದ ವಲಯದಿಂದ ಬಹುದೂರವಿದ್ದು, ಸುರಕ್ಷಿತ ವಲಯದಲ್ಲಿದೆ. ಭೂಕಂಪ ಸಂಭವಿಸುವ ಸಾಧ್ಯತೆಗಳು ಅತಿ ವಿರಳಾತೀತವಾಗಿರುತ್ತದೆ. ಜೊತೆಗೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ನಿರಂತರವಾಗಿ ಈ ಭಾಗದ ಮೇಲೆ ತೀವ್ರ ಕಣ್ಗಾವಲು ಇಟ್ಟಿದೆ ಹಾಗೂ ಜಿಲ್ಲಾಡಳಿತವು ಸಹ ನಿಗಾವಹಿಸಿದೆ. ಆದ್ದರಿಂದ ಜನರು ಯಾವುದೇ ವದಂತಿಗಳಿಗೆ ಕಿವಿಕೊಡಬಾರದು ಹಾಗೂ ಈ ಬಗ್ಗೆ ಸಾರ್ವಜನಿಕರು ಹೆಚ್ಚಿನ ಆತಂಕಕ್ಕೆ ಒಳಗಾಗುವ ಅವಶ್ಯಕತೆಯಿಲ್ಲ ಎಂದರು.

ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸಂಭವಿಸಿರುವ ಭೂಕಂಪನಗಳನ್ನು ಅವಲೋಕಿಸಲಾಗಿ ಇದರ ತೀವ್ರತೆಯ ನಕಾಶೆಯನ್ವಯ ಈ ಭೂಕಂಪನಗಳ ತೀವ್ರತೆಯು ಅತ್ಯಂತ ಕನಿಷ್ಠ ಪ್ರಮಾಣದ್ದಾಗಿದೆ. ಸುಮಾರು ೨೦ ರಿಂದ ೩೦ ಕಿಮೀ ವ್ಯಾಪ್ತಿಯವರೆಗೆ ಭೂಕಂಪನದ ಅನುಭವವಾಗಿರಬಹುದೆಂದು ಅಂದಾಜಿಸಲಾಗಿದೆ. ಇದನ್ನೂ ಓದಿ:  ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು: ಯಶ್

chickballpur 44 1

ಇದರ ಪರಿಣಾಮದಿಂದಾಗಿ ಭೂಮಿಯು ಅಲುಗಾಡಿದ ಅನುಭವವಾಗಿದ್ದರೂ ಸಹ ಈ ಪ್ರಮಾಣದ ಭೂಕಂಪನವು ಸ್ಥಳೀಯ ಸಮುದಾಯಕ್ಕೆ ಯಾವುದೇ ರೀತಿಯ ಅಪಾಯಕಾರಿಯಲ್ಲ. ಇದರಿಂದ ಜನರು ಗಾಬರಿಗೊಳ್ಳುವ ಹಾಗೂ ಹೆಚ್ಚಿನ ಆತಂಕಗೊಳ್ಳುವ ಅವಶ್ಯಕತೆಯಿಲ್ಲವೆಂದು ಭೇಟಿ ನೀಡಿದ ಸ್ಥಳೀಯರಿಗೆ ವಿಜ್ಞಾನಿಗಳು ಮನೋಸ್ಥೈರ್ಯ ತುಂಬಿದರು.

೨.೯, ೩.೦ ಮತ್ತು ೩.೬ ತೀವ್ರತೆಯ ಮೂರು ಭೂಕಂಪನಗಳು ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಡಿಸೆಂಬರ್ ೨೨ ಮತ್ತು ೨೩ ರಂದು ಸಂಭವಿಸಿವೆ. ಡಿಸೆಂಬರ್ ೨೨ ರಂದು ಸಂಭವಿಸಿರುವ, ಒಂದು ಭೂಕಂಪನದ ಕೇಂದ್ರಸ್ಥಾನವು ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್ ಗ್ರಾಮ ಪಂಚಾಯತಿಯಿAದ ಸುಮಾರು ೧.೪ ಕಿಮೀ ದೂರದಲ್ಲಿ ದಾಖಲಾಗಿದೆ.

ಇದು ಸುಮಾರು ೨.೯ರ ತೀವ್ರತೆಯನ್ನು ಹೊಂದಿದ್ದು ೧೧ ಕೀಮೀ ದೂರದ ಭೂಗರ್ಭದಲ್ಲಿ ಕೇಂದ್ರೀಕೃತವಾಗಿದೆ. ಮತ್ತೊಂದು ಭೂಕಂಪನವು ಚಿಕ್ಕಬಳ್ಳಾಪುರ ತಾಲೂಕಿನ ಅಡ್ಡಗಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಭೋಗಪರ್ತಿ ಗ್ರಾಮಕ್ಕೆ ೧.೨೩ ಕಿಮೀ ದೂರದಲ್ಲಿ ಮುಂಜಾನೆ ೭.೧೫ಕ್ಕೆ ಸಂಭವಿಸಿದ್ದು, ಇದರ ತೀವ್ರತೆಯು ೩.೦೦ರಷ್ಟಿದ್ದು ಇದು ಭೂಗರ್ಭದ ಸುಮಾರು ೨೩ ಕಿಮೀ ದೂರದಲ್ಲಿ ಕೇಂದ್ರೀಕೃತವಾಗಿದೆ.

ಡಿಸೆAಬರ್ ೨೩ ರಂದು ಸಂಭವಿಸಿರುವ ಭೂಕಂಪನವು ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾದೆನಹಳ್ಳಿ ಗ್ರಾಮಕ್ಕೆ ೧.೨ ಕಿಮೀ ದೂರದಲ್ಲಿ ಮಧ್ಯಾಹ್ನ ೨:೧೬ಕ್ಕೆ ಸಂಭವಿಸಿದೆ. ಇದರ ತೀವ್ರತೆಯು ೩.೬ ರಷ್ಟಿದ್ದು, ಇದು ಭೂಗರ್ಭದ ಸುಮಾರು ೧೮ ಕಿಮೀ ದೂರದಲ್ಲಿ ಕೇಂದ್ರೀಕೃತವಾಗಿದೆ.

ಈ ಸಂದರ್ಭದಲ್ಲಿ ಜಿಲ್ಲೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ, ಕಿರಿಯ ಭೂವಿಜ್ಞಾನಿ ಕೃಷ್ಣಮೂರ್ತಿ.ಬಿ.ಎನ್, ಚಿಕ್ಕಬಳ್ಳಾಪುರ ತಾಲೂಕಿನ ತಹಸಿಲ್ದಾರ್ ಗಣಪತಿಶಾಸ್ತ್ರೀ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ಈ ಸಂದರ್ಭದಲ್ಲಿ ಭೂವಿಜ್ಞಾನಿ ಸಂತೋಷ್ ಕುಮಾರ್ ರವರು ಮಾತನಾಡಿ, ಭೂಕಂಪನದ ಮೊದಲು ಮತ್ತು ಭೂಕಂಪನದ ಸಮಯದಲ್ಲಿ ಕೈಗೊಳ್ಳಬೇಕಾದ ಸಿದ್ಧತೆ ಬಗ್ಗೆ ಕರಪತ್ರಗಳನ್ನು ನೀಡಿ ಜನರಲ್ಲಿ ಜಾಗೃತಿ ಮೂಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *