ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಭೀತಿ ಮಧ್ಯೆ ಕೊರೊನಾ 3ನೇ ಅಲೆ ಆತಂಕ ಹೆಚ್ಚಾಗಿದೆ. ಹೆಮ್ಮಾರಿಗೆ ತಡೆ ಒಡ್ಡಲು ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
Advertisement
ರಾಜ್ಯದಲ್ಲಿ ಡಿಸೆಂಬರ್ 22ರಿಂದ ಜನವರಿ 2ರವರೆಗೆ ಮತ್ತೆ ನೈಟ್ ಕರ್ಫ್ಯೂ ಜಾರಿಗೆ ಸಲಹೆ ನೀಡಿದೆ. ಸಂಜೆ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಗೆ ಶಿಫಾರಸು ಮಾಡಿದ್ದು, ಈ ಹತ್ತು ದಿನಗಳ ಅವಧಿಯಲ್ಲಿ ಪಬ್, ರೆಸ್ಟೋರೆಂಟ್, ಮಾಲ್‍ಗಳಿಗೆ ಷರತ್ತು ವಿಧಿಸುವ ಸಾಧ್ಯತೆಯಿದೆ. ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‍ನಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ನಿರ್ಬಂಧ ವಿಧಿಸುವಂತೆ ಶಿಫಾರಸು ಮಾಡಿದೆ. ಇದನ್ನೂ ಓದಿ: ರಾಜ್ಯ ವಿಶ್ವ ಮಟ್ಟದಲ್ಲೇ ಅತಿ ದೊಡ್ಡ ಭ್ರಷ್ಟ ಸರ್ಕಾರ ಎಂದು ಗುತ್ತಿಗೆದಾರರ ಸಂಘದವರೇ ಹೇಳಿದ್ದಾರೆ: ಡಿಕೆಶಿ
Advertisement
Advertisement
ದೇಗುಲ, ಚರ್ಚ್, ಮಸೀದಿಗಳಲ್ಲೂ ಕಠಿಣ ನಿಯಮ ಜಾರಿ ಮಾಡುವ ನಿರೀಕ್ಷೆಯಿದೆ. ಧಾರ್ಮಿಕ ಕೇಂದ್ರಗಳಲ್ಲಿ ಡಬಲ್ ಡೋಸ್ ಲಸಿಕೆ ಆದ್ರಷ್ಟೇ ಅವಕಾಶ ನೀಡುವ ಸಾಧ್ಯತೆಯಿದೆ. ಈ ಸಂಬಂಧ ಸೋಮವಾರ ನಡೆಯುವ ಸಂಪುಟ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುವ ಸಂಭವ ಇದೆ. ಈ ನಡುವೆ ಲಸಿಕೆ ಹಂಚಿಕೆಯಲ್ಲಿ ಕರ್ನಾಟಕ ಹೊಸ ದಾಖಲೆ ಸೃಷ್ಟಿಸಿದೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ಶೇ.100ರಷ್ಟು ವ್ಯಾಕ್ಸಿನೇಷನ್ ಆಗಿದೆ. ರಾಜ್ಯದಲ್ಲಿ ಈವರೆಗೂ 8.17 ಕೋಟಿ ಲಸಿಕೆ ಹಂಚಿಕೆ ಮಾಡಿದೆ. ಇದನ್ನೂ ಓದಿ: ಮುಂದಿನ ವರ್ಷ ಕೆಲ ಶಾಲೆಗಳಲ್ಲಿ NEP ಜಾರಿ: ಬಿ.ಸಿ.ನಾಗೇಶ್
Advertisement