ಬೆಂಗಳೂರು: ಬಸ್ ನಿಲ್ದಾಣ, ವ್ಯಾಪಾರ ಮಳಿಗೆ ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ (Expired Ingredients Sales) ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ (Social Media) ಬಿತ್ತರವಾದ ಸುದ್ದಿ ಅನ್ವಯ ಕ್ರಮಕ್ಕೆ ಸಿಎಂ ಸೂಚನೆ ನೀಡಿದ್ದರು. ಸಿಎಂ ಸೂಚನೆ ಮೇರೆಗೆ ಅಧಿಕಾರಿಗಳಿಂದ ಕ್ರಮದ ಕುರಿತು ಸಿಎಂ ಕಚೇರಿಯಿಂದ (CM Of Karnataka office) ಮಾಧ್ಯಮ ಹೇಳಿಕೆ ಬಿಡುಗಡೆಯಾಗಿದೆ. ಇದನ್ನೂ ಓದಿ: ಫುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿ ಹತ್ಯೆ – ರಾಜ್ಯಸಭಾ ಸಂಸದರ ಪುತ್ರಿಗೆ ಜಾಮೀನು!
Advertisement
Advertisement
ಬಸ್ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ.
Advertisement
ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 (Food Security Act 2006) ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಇದನ್ನೂ ಓದಿ: ದರ್ಶನ್ ಹೆಸ್ರು ಹೇಳದಂತೆ 30 ಲಕ್ಷಕ್ಕೆ ನಡೆದಿತ್ತಾ ಡೀಲ್? – ಇಂಚಿಂಚು ಮಾಹಿತಿ ಬಾಬ್ಬಿಟ್ಟ ಆರೋಪಿ ಪ್ರದೋಶ್
Advertisement
ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿದೆ. ಮುಂದಿನ ದಿನಗಳಲ್ಲಿ ಪುನರ್ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಲಾಗಿದೆ.