ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕ್ಷೇತ್ರದಲ್ಲೇ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್ ಮಿಲೆಟ್ ಲಡ್ಡು ವಿತರಣೆ ಮಾಡಲಾಗಿದೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಮಕ್ಕಳಿಗೆ ಎಕ್ಸ್‌ಪೈರ್ಡ್ ಮಿಲೆಟ್ ಲಡ್ಡು ಪೂರೈಕೆ ಮಾಡಲಾಗಿದೆ. ಅಂಗನವಾಡಿ ಮಕ್ಕಳ ಆರೋಗ್ಯದ ಜೊತೆಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳ ಚೆಲ್ಲಾಟವಾಡುತ್ತಿದ್ದಾರೆ. ರಾಜ್ಯದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಲೆಂಬ ಉದ್ದೇಶಕ್ಕೆ ಮಿಲೆಟ್ ಲಡ್ಡು ವಿತರಣೆ ಮಾಡಲಾಗುತ್ತಿದೆ. ಆದರೆ ಪೌಷ್ಟಿಕ ಆಹಾರ ವಿತರಣೆಯಲ್ಲೇ ಭಾರಿ ಅಕ್ರಮ ಬೆಳಕಿಗೆ ಬಂದಿದೆ. ಇದನ್ನೂ ಓದಿ: ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ ಪುನಾರಚನೆಗೆ 24 ಎಂಎಲ್‌ಸಿಗಳಿಂದ ಪತ್ರ
ಬೆಳಗಾವಿಯ ಮೂರು ಅಂಗನವಾಡಿ ಕೇಂದ್ರಗಳಿಗೆ ಕನ್ನಡ ಹೋರಾಟಗಾರ್ತಿ ಕಸ್ತೂರಿಭಾವಿ ಭೇಟಿ ನೀಡಿದ್ದು, ಭೇಟಿಯ ವೇಳೆ ಆರು ತಿಂಗಳ ಹಿಂದೆಯೇ ಎಕ್ಸ್‌ಪೈರ್ಡ್ ಆಗಿರುವ ಪದಾರ್ಥಗಳ ವಿತರಣೆ ಮಾಡಿದ್ದು ಕಂಡು ಬಂದಿದೆ. ಈ ವೇಳೆ ತಾವೇ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕಸ್ತೂರಿಭಾವಿ ಫೋಸ್ಟ್ ಮಾಡಿದ್ದು, ವೈರಲ್ ಆಗ್ತಿರುವ ವಿಡಿಯೋದಲ್ಲಿ ಹುಳ ಬಿದ್ದ ರವಾ, ಅವಧಿ ಮುಗಿದ ಸಜ್ಜೆ ಲಡ್ಡು, ಸಾಂಬಾರ್ ಪುಡಿ ಕಾಣುತ್ತಿದೆ.
2025ರ ಅಕ್ಟೋಬರ್‌ನಲ್ಲಿ ಎಕ್ಸ್‌ಪೈರ್ಡ್ ಆಗಿರುವ ಮಿಲೆಟ್ ಲಡ್ಡು ಈಗ ವಿತರಣೆ ಮಾಡಲಾಗಿದ್ದು, ಅಧಿಕಾರಿಗಳು, ಅಂಗನವಾಡಿ ಸಹಾಯಕಿಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರ ಕ್ಷೇತ್ರದಲ್ಲೇ ಈ ರೀತಿ ಅಕ್ರಮ ನಡೆದರೆ ಹೇಗೆಂದು ಆಕ್ರೋಶ ವ್ಯಕ್ತವಾಗುತ್ತಿದ್ದು, ಅವಧಿ ಮುಗಿದ ಆಹಾರ ಸೇವನೆಯಿಂದ ಅಜೀರ್ಣ, ವಾಂತಿ-ಭೇದಿ, ಜ್ವರ ಬರುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.ಇದನ್ನೂ ಓದಿ: ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ – ಶಾರ್ಟ್ ಸರ್ಕ್ಯೂಟ್‌ನಿಂದಾಗಿ 20 ಅಂಗಡಿಗಳಿದ್ದ ಬಿಲ್ಡಿಂಗ್‌ಗೆ ಬೆಂಕಿ

