ಹಾಸನ: ಹಳೇಆಲೂರು ಗ್ರಾಮದಲ್ಲಿ ಸ್ಫೋಟ (Explosion) ಸಂಭವಿಸಿ ದಂಪತಿ ಗಾಯಗೊಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಿಡಿಮದ್ದು ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಘಟನೆಯಲ್ಲಿ ಸುದರ್ಶನ್ ಆಚಾರ್ (32), ಕಾವ್ಯ (27) ಹಾಗೂ ಒಂದು ಮಗುವಿಗೆ ಗಾಯವಾಗಿದೆ. ಗಾಯಾಳುಗಳಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ದಂಪತಿ ಸ್ಥಿತಿ ಚಿಂತಾಜನಕವಾಗಿದೆ. ಉಳಿದಂತೆ ಮಗು ಸೇರಿ ಮನೆಯಲ್ಲಿದ್ದ ಇತರ ನಾಲ್ವರು ಸುರಕ್ಷಿತವಾಗಿದ್ದಾರೆ. ಇದನ್ನೂ ಓದಿ: ಹಾಸನ | ಮನೆಯಲ್ಲಿ ನಿಗೂಢ ಸ್ಫೋಟ – ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಗಾಯಾಳುಗಳ ರವಾನೆ
ಮನೆಯಲ್ಲಿದ್ದ ಎರಡು ಸಿಲಿಂಡರ್ ಹಾಗೂ ಗೀಸರ್ ಹಾಗೇ ಇದ್ದೂ ಸ್ಫೋಟಕ್ಕೆ ಕಾರಣವೇನು ಎಂಬುದು ನಿಗೂಢವಾಗಿಯೇ ಉಳಿದಿತ್ತು. ಈಗ ಸಿಡಿಮದ್ದು ತಯಾರಿಕೆ ಮಾಡುತ್ತಿದ್ದ ಮದ್ದು ಸ್ಫೋಟಗೊಂಡು ಈ ದುರಂತ ನಡೆದಿರುವುದು ಗೊತ್ತಾಗಿದೆ. ಮನೆಯಲ್ಲಿ ಸಿಡಿಮದ್ದನ್ನು ತಯಾರಿಸುತ್ತಿದ್ದರು. ಅದಕ್ಕಾಗಿ ಮದ್ದನ್ನು ಸಂಗ್ರಹಿಸಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮನೆಯ ಸುತ್ತ ಆಲೂರು ಪೊಲೀಸರು ಭದ್ರತೆ ನೀಡಿದ್ದು, ಮಂಗಳೂರಿನಿಂದ ಸ್ಥಳ ಪರಿಶೀಲನೆಗೆ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಪರಿಶೀಲನೆ ನಡೆಸಲಿದೆ. ಇದನ್ನೂ ಓದಿ: ಮದ್ದೂರು ಕಲ್ಲು ತೂರಾಟಕ್ಕೆ ಟ್ವಿಸ್ಟ್ – ಟಾರ್ಗೆಟ್ ಮಾಡಿದ್ದೇ ಒಂದು, ಕಲ್ಲು ತೂರಿದ್ದೇ ಮತ್ತೊಂದು ಗಣೇಶನ ಮೇಲೆ

