ಹೈದರಾಬಾದ್: ಔಷಧ ಘಟಕದಲ್ಲಿ (Pharmaceutical Company) ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ತೆಲಂಗಾಣದ (Telangana) ಯಾದಾದ್ರಿ-ಭುವನಗಿರಿ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಸುಮಾರು 10:30ರ ವೇಳೆಗೆ ಪೊಚಂಪಲ್ಲಿ ಮಂಡಲದ ದೋತಿಗುಡೆಂ ಗ್ರಾಮದ ಹೊರವಲಯದಲ್ಲಿರುವ ಹ್ಯಾಜೆಲೋ ಲ್ಯಾಬ್ ಪ್ರೈ.ಲಿ ಕಂಪನಿಯಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ 9 ಮಂದಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ರಂಗನಾಥಸ್ವಾಮಿ ಮುಂದೆ ಪುತ್ರ ಪ್ರಜ್ವಲ್‌ನನ್ನು ನೆನೆದು ಕಣ್ಣೀರಿಟ್ರಾ ಭವಾನಿ ರೇವಣ್ಣ?
ಸ್ಫೋಟದ ಭಾರೀ ಶಬ್ದ ಕೇಳಿದ ಬಳಿಕ ಸ್ಥಳೀಯ ನಿವಾಸಿಗಳು ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದರು. ಇದನ್ನೂ ಓದಿ: Exclusive: ಅತ್ತ ಇಡಿ ವಿಚಾರಣೆ.. ಇತ್ತ ಬೆಂಗಳೂರಿಂದ ದೆಹಲಿಗೆ ಐಎಎಸ್ ಅಧಿಕಾರಿ ಎಸ್ಕೇಪ್!
ಸ್ಫೋಟದ ಬಳಿಕ ಕಂಪನಿಯ ಆವರಣದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು. ಅಗ್ನಿಶಾಮಕ ಸಿಬ್ಬಂದಿ ನೀರಿನ ಪೈಪ್‌ಗಳ ಮೂಲಕ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸಪಟ್ಟರು. ರಕ್ಷಣಾ ಸಿಬ್ಬಂದಿ ಹಾಗೂ ಕಾರ್ಮಿಕರು ಕೂಡ ಸ್ಥಳದಲ್ಲಿದ್ದು, ಕಾರ್ಯಾಚರಣೆಗೆ ಸಹಕರಿಸಿದರು. ಇದನ್ನೂ ಓದಿ: ಹಂಪಿಯ ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಬಿದ್ದು ತಾಯಿ, ಮಗಳು ನಾಪತ್ತೆ
ರಿಯಾಕ್ಟರ್ ಸ್ಫೋಟ ಶಂಕೆ:
ಪ್ರಾಥಮಿಕ ಮಾಹಿತಿಯ ಪ್ರಕಾರ, ಫಾರ್ಮಾ ಕಂಪನಿಯಲ್ಲಿದ್ದ ರಿಯಾಕ್ಟರ್ ಸ್ಫೋಟಗೊಂಡಿರುವ ಸಾಧ್ಯತೆಯನ್ನು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಆದರೆ ಸ್ಫೋಟಕ್ಕೆ ನಿಖರವಾಗಿ ಕಾರಣವೇನು ಎಂಬುದು ಇನ್ನೂ ದೃಢಪಟ್ಟಿಲ್ಲ. ಇದನ್ನೂ ಓದಿ: ತಾರಕಕ್ಕೇರಿದ ಹಳೇ ಹುಬ್ಬಳ್ಳಿ ಆಸರ ಓಣಿಯ ಪುಷ್ಕರಣಿ ವಿವಾದ; ಬೃಹತ್ ಪ್ರತಿಭಟನೆ – ಹಿಂದೂ ಮುಖಂಡರು, ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಘಟನೆಯ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸ್ಫೋಟ ಸಂಭವಿಸಿದ ಸ್ಥಳ, ರಿಯಾಕ್ಟರ್‌ನ ಸ್ಥಿತಿ ಹಾಗೂ ಕಂಪನಿಯಲ್ಲಿ ಕೈಗೊಳ್ಳಲಾಗಿದ್ದ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಜಾರ್ಖಂಡ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ – ಮೂವರು ಎಂಜಿನಿಯರ್ ದುರ್ಮರಣ

