ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಾಂಬ್ ಸ್ಫೋಟಿಸಿ ಜೈಲು ಸೇರಿರುವ ಡ್ರೋನ್ ಪ್ರತಾಪ್‌ಗೆ (Drone Pratap) ಜಾಮೀನು ಮಂಜೂರಾಗಿದೆ.
ಮಧುಗಿರಿ ಜೆಎಮ್‌ಎಫ್‌ಸಿ ಕೋರ್ಟ್ (Court) ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜಾಮೀನು ಪ್ರಕ್ರಿಯೆ ಮುಗಿಯಲು ಇನ್ನೂ ಎರಡು ದಿನಗಳ ಕಾಲ ಸಮಯ ಬೇಕಾಗಿದ್ದರಿಂದ ಗುರುವಾರ ಪ್ರತಾಪ್ ಬಿಡುಗಡೆ ಆಗುವ ಸಾಧ್ಯತೆ ಇದೆ. ಸದ್ಯ ಡ್ರೋನ್ ಪ್ರತಾಪ್ ಮಧುಗಿರಿಯ ಉಪ ಕಾರಾಗೃಹದಲ್ಲಿ ಇದ್ದಾನೆ.
Advertisement
ಮಧುಗಿರಿಯ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಬಾಂಬ್ ಸ್ಫೋಟಿಸಿ ಡ್ರೋನ್ ಪ್ರತಾಪ್ ಎಡವಟ್ಟು ಮಾಡಿಕೊಂಡಿದ್ದ. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆತನನ್ನು ಬಂಧಿಸಲಾಗಿತ್ತು. ಬಳಿಕ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
Advertisement
ಏನಿದು ಪ್ರಕರಣ?
ನೀರಿಗೆ ಕೆಮಿಕಲ್ ಹಾಕಿ ಡ್ರೋನ್ ಪ್ರತಾಪ್ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದಾನೆ. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ. ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ವೀಡಿಯೋ ನೋಡಿ ಪ್ರತಾಪ್ ಬಿಲ್ಡಪ್ ಬೇರೆ ಕೊಟ್ಟಿದ್ದ. ಜೊತೆಗೆ ನಗು-ನಗುತ್ತಲೇ ನೋಡಿ.. ನೋಡಿ ದೊಡ್ಡ ಬ್ಲಾಸ್ಟ್ ಇದು ಎಂದು ಪ್ರತಾಪ್ ಕೂಗಿದ್ದ.
Advertisement
Advertisement
ಈ ರೀತಿ ವಿಡಿಯೋ ಮಾಡೋದು ಕಾನೂನು ಬಾಹಿರ. ಹೀಗಾಗಿ ಪ್ರತಾಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ. ಯಾವೆಲ್ಲ ಕೆಮಿಕಲ್ ಹಾಕಿದ್ರೇ ಬ್ಲಾಸ್ಟ್ ಆಗುತ್ತೆ ಅಂತಾನೂ ಲೈವ್‌ನಲ್ಲಿ ಹೇಳಿದ್ದ. ಇದನ್ನು ಕಿಡಿಗೇಡಿಗಳು ಕುಕೃತ್ಯಕ್ಕೆ ಬಳಸುವ ಸಾಧ್ಯತೆ ಇದೆ ಎಂದು ಪರಿಸತವಾದಿ ವಿಜಯ್ ನಿಶಾಂತ್ ಕಿಡಿಕಾರಿದ್ದರು.
ಈ ರೀತಿಯ ಪ್ರಯೋಗ ಅಪಾಯಕಾರಿ ಮತ್ತು ಕಾನೂನು ಬಾಹಿರವಾದದ್ದು. ಈ ಬ್ಲಾಸ್ಟ್ ವಿಡಿಯೋ ಮಾಡುವ ಮುನ್ನ ಕನಿಷ್ಟ ಪಕ್ಷ ಡ್ರೋನ್ ಪ್ರತಾಪ್ ಯೋಚನೆ ಮಾಡಬೇಕಾಗಿತ್ತು ಇದ್ಯಾವ ಸೀಮೆ ವಿಜ್ಞಾನದ ಬಗ್ಗೆ ಮಾಹಿತಿ ಕೊಡ್ತಾ ಇರೋದು ಎಂದು ಜನರು ಆಕ್ರೋಶ ಹೊರಹಾಕಿದ್ದರು.