ಪಟಾಕಿ ಸಂಗ್ರಹಿಸಿದ್ದ ಗೋಡೌನ್‌ನಲ್ಲಿ ಸ್ಫೋಟ – 4 ಸಾವು, 7 ಜನ ಗಂಭೀರ

Public TV
1 Min Read
Madhya Pradesh Fireworks Factory

ಭೋಪಾಲ್: ಅಕ್ರಮವಾಗಿ ಪಟಾಕಿಗಳನ್ನು (Fireworks) ಸಂಗ್ರಹಿಸಿದ್ದ ಗೋಡೌನ್‌ನಲ್ಲಿ (Godown) ಸ್ಫೋಟ (Explosion) ಉಂಟಾಗಿ 4 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಮೊರೆನಾ ಜಿಲ್ಲೆಯ ಬನ್ಮೋರ್ ನಗರದಲ್ಲಿ ಗುರುವಾರ ನಡೆದಿದೆ.

ದೀಪಾವಳಿ ಹಿನ್ನೆಲೆ ಅಕ್ರಮವಾಗಿ ಪಟಾಕಿ ತುಂಬಿದ್ದ ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಅವಶೇಷಗಳಡಿ ಸಿಲುಕಿ ಹೋಗಿರುವ ಶಂಕೆ ವ್ಯಕ್ತವಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಲು ಗನ್ ಪೌಡರ್ ಅಥವಾ ಗ್ಯಾಸ್ ಸಿಲಿಂಡರ್ ಕಾರಣವಾಗಿರುವ ಸಾಧ್ಯತೆಯಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಗಾಯಗೊಂಡ 7 ಜನರ ಸ್ಥಿತಿಯೂ ಗಂಭೀರವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 23ನೇ ಮಹಡಿಯಿಂದ ಬಿದ್ದು ಮುಂಬೈನ ಖ್ಯಾತ ಬಿಲ್ಡರ್ ಸಾವು

 

Madhya Pradesh Fireworks Factory 2

ಅವಶೇಷಗಳನ್ನು ತೆರವುಗೊಳಿಸಲು ಯಂತ್ರಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸರು ಹಾಗೂ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ ರಾಜೇಶ್ ಚಾವ್ಲಾ ತಿಳಿಸಿದ್ದಾರೆ. ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

3 ವರ್ಷಗಳ ಹಿಂದೆ ಇದೇ ರೀತಿಯ ಘಟನೆ ಪಂಜಾಬ್‌ನಲ್ಲಿ ನಡೆದಿತ್ತು. ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *