ಭೋಪಾಲ್: ಅಕ್ರಮವಾಗಿ ಪಟಾಕಿಗಳನ್ನು (Fireworks) ಸಂಗ್ರಹಿಸಿದ್ದ ಗೋಡೌನ್‌ನಲ್ಲಿ (Godown) ಸ್ಫೋಟ (Explosion) ಉಂಟಾಗಿ 4 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಮೊರೆನಾ ಜಿಲ್ಲೆಯ ಬನ್ಮೋರ್ ನಗರದಲ್ಲಿ ಗುರುವಾರ ನಡೆದಿದೆ.
ದೀಪಾವಳಿ ಹಿನ್ನೆಲೆ ಅಕ್ರಮವಾಗಿ ಪಟಾಕಿ ತುಂಬಿದ್ದ ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ಅವಶೇಷಗಳಡಿ ಸಿಲುಕಿ ಹೋಗಿರುವ ಶಂಕೆ ವ್ಯಕ್ತವಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಗೋಡೌನ್‌ನಲ್ಲಿ ಸ್ಫೋಟ ಸಂಭವಿಸಲು ಗನ್ ಪೌಡರ್ ಅಥವಾ ಗ್ಯಾಸ್ ಸಿಲಿಂಡರ್ ಕಾರಣವಾಗಿರುವ ಸಾಧ್ಯತೆಯಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಗಾಯಗೊಂಡ 7 ಜನರ ಸ್ಥಿತಿಯೂ ಗಂಭೀರವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 23ನೇ ಮಹಡಿಯಿಂದ ಬಿದ್ದು ಮುಂಬೈನ ಖ್ಯಾತ ಬಿಲ್ಡರ್ ಸಾವು
Advertisement
Advertisement
Advertisement
ಅವಶೇಷಗಳನ್ನು ತೆರವುಗೊಳಿಸಲು ಯಂತ್ರಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸರು ಹಾಗೂ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಪೊಲೀಸ್ ಮಹಾನಿರೀಕ್ಷಕ ರಾಜೇಶ್ ಚಾವ್ಲಾ ತಿಳಿಸಿದ್ದಾರೆ. ಇದನ್ನೂ ಓದಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ
3 ವರ್ಷಗಳ ಹಿಂದೆ ಇದೇ ರೀತಿಯ ಘಟನೆ ಪಂಜಾಬ್‌ನಲ್ಲಿ ನಡೆದಿತ್ತು. ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.