ಚೆನ್ನೈ: ಪಟಾಕಿ ಕಾರ್ಖಾನೆಯೊಂದರಲ್ಲಿ (Firecracker Factory) ಸ್ಫೋಟ (Explosion) ಉಂಟಾಗಿ ಭಾರೀ ಬೆಂಕಿಗೆ (Fire) ಐವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಇಂದು ತಮಿಳುನಾಡಿನ (Tamil Nadu) ಮಧುರೈ (Madurai) ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ ಮಧುರೈ ಜಿಲ್ಲೆಯ ಉಸಿಲಂಪಟ್ಟಿ ಬಳಿಯ ಅಜುಗುಸಿರೈ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಸದ್ದು ಕೇಳಿದ ಸ್ಥಳೀಯರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಇದನ್ನೂ ಓದಿ: ಬಾಲಕನಿಗೆ ಬೈಕ್ ಓಡಿಸಲು ಕೊಟ್ಟ ತಂದೆಗೆ 25 ಸಾವಿರ ರೂ. ದಂಡ
ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 13 ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಮದ್ಯ ಕುಡಿದು ಮಲಗಿದ 24 ಕಾಡಾನೆಗಳು – ಎಬ್ಬಿಸಲು ಡೋಲು ಬಾರಿಸಿದ್ರು
ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಫೋಟದ ಹಿಂದಿನ ಕಾರಣ ತಿಳಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.