ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಬಳಿಕ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
ಅಫ್ಘಾನಿಸ್ತಾನದ ರಾಜಧಾನಿಯಲ್ಲಿರುವ ಖಲೀಫಾ ಸಾಹಿಬ್ ಮಸೀದಿಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ ಎಂದು ಆಂತರಿಕ ಸಚಿವಾಲಯದ ಉಪ ವಕ್ತಾರ ಬೆಸ್ಮುಲ್ಲಾ ಹಬೀಬ್ ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ ಪಡೆ ನನ್ನನ್ನು ಸೆರೆ ಹಿಡಿಯಲು ಭಾರೀ ಹತ್ತಿರದಲ್ಲಿತ್ತು: ಝೆಲೆನ್ಸ್ಕಿ
Advertisement
Advertisement
ಪ್ರಾರ್ಥನೆಯ ಬಳಿಕ ಸುನ್ನಿ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಜನರು ಜಮಾಯಿಸಿದ್ದ ಸಂದರ್ಭದಲ್ಲಿ ಸ್ಫೋಟ ನಡೆದಿದೆ. ಸಭೆಯಲ್ಲಿ ಆತ್ಮಾಹುತಿ ಬಾಂಬರ್ ಸೇರಿಕೊಂಡಿದ್ದು, ಸ್ಫೋಟವನ್ನು ನಡೆಸಿದ್ದಾನರ ಎಂದು ಮಸೀದಿಯ ಮುಖ್ಯಸ್ಥ ಸೈಯದ್ ಫಾಜಿಲ್ ಅಘಾ ತಿಳಿಸಿದ್ದಾರೆ. ಇದನ್ನೂ ಓದಿ: ಚೀನಿಗಳಿಗೆ ವೀಸಾ ಬಂದ್ ಮಾಡಿದ ಬೆನ್ನಲ್ಲೇ ಭಾರತೀಯ ವಿದ್ಯಾರ್ಥಿಗಳಿಗೆ ಬನ್ನಿ ಎಂದ ಚೀನಾ
Advertisement
ಘಟನೆಯ ಬಳಿಕ ಆಸ್ಪತ್ರೆಗೆ 66 ಮೃತ ದೇಹಗಳು ಹಾಗೂ 78 ಗಾಯಾಳುಗಳನ್ನು ಸಾಗಿಸಲಾಗಿದೆ ಎಂದು ವರದಿಯಾಗಿದೆ.