ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ (Bengaluru) ಅಪಾರ ಪ್ರಮಾಣದ ಸ್ಫೋಟಕ (Explosion) ವಸ್ತು ಪತ್ತೆಯಾಗಿದೆ. ನಗರದ ಸೋಲದೇವನಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಸ್ಫೋಟಕ ವಶಪಡಿಸಿಕೊಂಡಿದ್ದಾರೆ.
ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿ ಹಾಗೂ ದಾಸೇನಹಳ್ಳಿ ಬಳಿಯ ಎರಡು ಮನೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಅನುಮತಿ ಇಲ್ಲದೆ ಮನೆಯಲ್ಲಿ ಆಡಗಿಸಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ವಿಸಿ ನಾಲೆಗೆ ಬಿತ್ತು ಕಾರು – ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವು
ಎರಡೂ ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಸಾಮಗ್ರಿ ಪತ್ತೆಯಾಗಿದೆ. ಎರಡೂವರೆ ಕೆಜಿ ಸಲ್ಫರ್ ಪೌಡರ್, 250 ಗ್ರಾಂ ಎಕ್ಸ್‌ಪ್ಲೋಸಿವ್ ಜೆಲ್, 45 ಕೆಜಿ ಪೊಟಾಶಿಯಂ ನೈಟ್ರೇಟ್ ವೈಟ್ ಪೌಢರ್ ಹಾಗೂ ಸ್ಫೋಟಕ ಮದ್ದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿದ್ದ ಶಂಕರ್ ಹಾಗೂ ಕುಮಾರ್ ಎಂಬಿಬ್ಬರನ್ನು ಸೋಲದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ ದಾಸೇನಹಳ್ಳಿಯ ರಾಘವೇಂದ್ರ ಲೇಔಟ್‌ನ ಮನೆ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಶ್ರೀನಿವಾಸ್ ಎಂಬಾತನ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲೂ ಕೆಜಿಗಟ್ಟಲೆ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಇದನ್ನೂ ಓದಿ: ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ – ಪುಣೆ ಎಟಿಎಸ್‌ನಿಂದ ಇಬ್ಬರು ಶಂಕಿತ ಉಗ್ರರ ಬಂಧನ
1.860 ಕೆಜಿ ತೂಕದ ಎಕ್ಸ್‌ಪ್ಲೋಸಿವ್ ಜೆಲ್, 1.950 ಗ್ರಾಂ ತೂಕದ ಕಾರ್ಕೋಲ ಫೌಡರ್, 7.850 ಗ್ರಾಂ ಸಲ್ಫರ್ ಫೌಡರ್, 13 ಕೆಜಿ ಪೊಟಾಶಿಯಂ ನೈಟ್ರೇಟ್ ಪತ್ತೆಯಾಗಿದೆ. ಪೊಲೀ0ಸರ ವಿಚಾರಣೆ ವೇಳೆ ಕಲ್ಲು ಕ್ವಾರಿಗಾಗಿ ಸಂಗ್ರಹ ಮಾಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ. ಅಕ್ರಮವಾಗಿ ಸ್ಫೋಟಕ ಸಂಗ್ರಹ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]