ಹುಬ್ಬಳ್ಳಿ: ಕೇವಲ ರಾಜ್ಯ ಮತ್ತು ದೇಶದಲ್ಲಿ ವ್ಯಾಪಾರ ಮಾಡುವುದರಿಂದ ಅಭಿವೃದ್ಧಿಯಾಗುವುದು ಕಷ್ಟ. ಗುಣಮಟ್ಟದ ರಫ್ತು ಕೈಗೊಳ್ಳುವುದರ ಮೂಲಕ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸರಕು ಮತ್ತು ಸೇವೆಗಳ ಬೇಡಿಕೆ ಹೆಚ್ಚಿಸಿಕೊಳ್ಳುವುದು ಇಂದಿನ ವ್ಯಾಪಾರದಲ್ಲಿ ಅವಶ್ಯಕವಾಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದ್ವಾ ಹೇಳಿದರು.
ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸಭಾಂಗಣದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹಾಗೂ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಸಹಯೋಗದಲ್ಲಿ ಆಜಾದಿಕಾ ಅಮೃತ ಮಹೋತ್ಸವ ವಾಣಿಜ್ಯ ಸಪ್ತಾಹದ ಅಂಗವಾಗಿ ಆಯೋಜಿಸಿದ ರಫ್ತುದಾರರ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶ ಪತ್ರ
Advertisement
Advertisement
ರಫ್ತಿನ ಬಗ್ಗೆ ತರಬೇತಿ ನೀಡುಬೇಕು
ಕೋವಿಡ್ ಪರಿಣಾಮದಿಂದ ಉದ್ದಿಮೆಗಳು ನೆಲಕಚ್ಚಿವೆ. ರಾಜ್ಯದಿಂದ ಹಲವಾರು ಸೇವೆಗಳನ್ನು ರಫ್ತು ಮಾಡಲು ಇಂದಿಗೂ ನಾವು ಮುಂಬೈಗೆ ತೆರಳುವ ಅನಿವಾರ್ಯತೆ ಇದೆ. ಅದರ ಬದಲಿಗೆ ನಮ್ಮ ರಾಜ್ಯದ ನೈಸರ್ಗಿಕ ಬಂದರು ಆದ ಕಾರವಾರವನ್ನು ಉಪಯೋಗಿಸಿಕೊಳ್ಳಬೇಕು. ರಫ್ತು ಸಾಗಣೆ ಕಾರ್ಯಕ್ಕಾಗಿ ಅಂಕೋಲಾ ರೈಲು ಮಾರ್ಗ ಅಗತ್ಯವಾಗಿರುವುದರಿಂದ ರಾಜ್ಯ ಸರ್ಕಾರದೊಂದಿಗೆ ಮಾತನಾಡಿ ಇದಕ್ಕೆ ಆದ್ಯತೆ ನೀಡಬೇಕು. ವಾಣಿಜ್ಯ ಮಂಡಳಿಯು ಪ್ರತಿ 6 ತಿಂಗಳಿಗೊಮ್ಮೆ ರಫ್ತಿನ ಬಗ್ಗೆ ತರಬೇತಿ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಂಡು ಉದ್ದಿಮೆದಾರರು ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಸರಕುಗಳನ್ನು ರಫ್ತು ಮಾಡಬೇಕು ಎಂದು ತಿಳಿಸಿದರು.
Advertisement
ರಾಜ್ಯದಲ್ಲಿ ಕೃಷಿ ಬೆಳೆಗೆ ಭೂಮಿ ಹಾಗೂ ಒಳ್ಳೆಯ ವಾತಾವರಣ
ಕೆನ್ ಅಗ್ರಿಟೆಕ್ ವ್ಯವಸ್ಥಾಪಕ ನಿರ್ದೇಶಕ ವಿವೇಕ ಪಿ.ನಾಯಕ್ ಮಾತನಾಡಿದ್ದು, ರಫ್ತು ಅಧಿಕಗೊಳಿಸಲು ಕೃಷಿಯ ಮೇಲೆ ಹೆಚ್ಚು ಗಮನ ಹರಿಸಬೇಕು. ಕೃಷಿ ಮತ್ತು ಆಹಾರ ಸಂಸ್ಕರಣೆ ಭಾಗದಲ್ಲಿ ಜಿಲ್ಲೆ ಹೆಚ್ಚಿನ ರಫ್ತನ್ನು ಸಾಧಿಸಿದೆ. ರಾಜ್ಯದಲ್ಲಿ ಕೃಷಿ ಬೆಳೆಗೆ ಭೂಮಿ ಹಾಗೂ ಒಳ್ಳೆಯ ವಾತಾವರಣ ಇರುವುದರಿಂದ ರಫ್ತಿನಲ್ಲಿ ಮೇಲುಗೈ ಸಾಧಿಸಲು ಸಹಾಯಕವಾಗಿದೆ. ಎಲ್ಲಿ ಮತ್ತು ಹೇಗೆ ಸ್ಪರ್ಧೆ ಮಾಡಬೇಕು ಎಂಬುವುದನ್ನು ತಿಳಿದುಕೊಂಡು ಕೃಷಿಯಲ್ಲಿ ಗುಣಮಟ್ಟದ ಬೆಳೆಗಳಿಗೆ ಹೆಚ್ಚಿನ ಗಮನಹರಿಸಬೇಕು ಎಂದರು. ಇದನ್ನೂ ಓದಿ: ಕ್ಯಾತಿನಕೊಪ್ಪ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ ಬಿತ್ತು
Advertisement
ದೇಶದಲ್ಲಿ ಶೇ.80 ರಷ್ಟು ಕೃಷಿಕರು ಸಣ್ಣ ಮತ್ತು ಮಧ್ಯಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಭೂರಹಿತ ರೈತರು ಕೃಷಿ ಕೆಲಸಗಳಲ್ಲಿ ಪರಿಣಿತಿ ಹೊಂದಿದ್ದು, ಅಂತಹ ರೈತರ ಕೌಶಲ್ಯಗಳನ್ನು ರಫ್ತಿಗಾಗಿ ಬಳಸಿಕೊಳ್ಳಬೇಕು. ಸುಸ್ಥಿರ ಆಹಾರ ಬೆಳೆಯ ಅಭಿವೃದ್ಧಿ ಪ್ರಾಮುಖ್ಯತೆ ನೀಡಬೇಕು. ಬೀಜದಿಂದ ರಫ್ತಿ ಮಾಡುವವರಿಗೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಿಳಿಸಿದರು.
ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಳ್ಳೆಯ ಗುಣಮಟ್ಟದ ಮೆಣಸಿನಕಾಯಿಯನ್ನು ಬೆಳೆಯಲಾಗುತ್ತಿದೆ. ಹೀಗೆ ರಫ್ತಿನ ಬೆಳೆಗಳ ಕಡೆಗೆ ಹೆಚ್ಚಿನ ಆಸಕ್ತಿ ವಹಿಸಿ ವ್ಯವಸಾಯ ಮಾಡಬೇಕು. ಕೃಷಿಯು ಎಲ್ಲ ಅಭಿವೃದ್ಧಿಗಳ ಕೀಲಿ ಇದ್ದಂತೆ, ಅದರ ವ್ಯವಸ್ಥೆಯ ಗುಣಮಟ್ಟವನ್ನು ಹೆಚ್ಚಿಸಬೇಕು. ಕೃಷಿಕರಿಂದ ರಫ್ತುದಾರರವರೆಗೆ ಎಲ್ಲರೂ ಅವರ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸುವುದರಿಂದ ರಫ್ತಿನ ಮಟ್ಟದಲ್ಲಿ ಒಳ್ಳೆಯ ಫಲಿತಾಂಶ ಪಡೆಯಲು ಸಹಾಯವಾಗುತ್ತೆ ಎಂದರು.
ವಾಣಿಜ್ಯೋದ್ಯಮ ಮಂಡಳಿ ಅಧ್ಯಕ್ಷ ಮಹೇಂದ್ರ ಲದ್ದಡ ಮಾತನಾಡಿದ್ದು, 2006 ರಲ್ಲಿ ರಾಜ್ಯದಲ್ಲಿ 8 ಲಕ್ಷ ಟನ್‍ಗಳಷ್ಟು ಹತ್ತಿ ಬೆಳೆಯಲಾಗುತ್ತಿತ್ತು. ಈ ಬೆಳೆ ಹೆಚ್ಚಿಸಲು ತೀರ್ಮಾನಿಸಿ ಸಭೆ ನಡೆಸಿ ರೈತರಿಗೆ ಸಲಹೆ ಸೂಚನೆಗಳನ್ನು ನೀಡಲಾಗುತ್ತಿತ್ತು. 10 ವರ್ಷದ ಅಂತರದಲ್ಲಿ 2016ರ ಹೊತ್ತಿಗೆ 1 ಕೋಟಿ ಟನ್ ಹತ್ತಿ ಬೆಳೆಯುವಲ್ಲಿ ರಾಜ್ಯ ಯಶಸ್ಸು ಕಂಡಿದೆ. 2012 ರಿಂದ 14 ರವರೆಗೆ ಹಲವು ಬಗೆಯ ಹತ್ತಿಯನ್ನು ದೇಶದಲ್ಲಿ ಬೆಳೆಯಲಾಗಿದೆ. ಇಂದು ದೇಶದಿಂದ ಅತೀ ಹೆಚ್ಚು ಹತ್ತಿಯನ್ನು ರಫ್ತು ಮಾಡಲಾಗುತ್ತಿದೆ. ಇಂಡೋನೇಷ್ಯಾ ಮತ್ತು ಪಶ್ಚಿಮ ಬಂಗಾಳಗಳಿಗೆ 25ಕ್ಕೂ ಹೆಚ್ಚು ವರ್ಷಗಳಿಂದ ಅವಿಭಜಿತ ಧಾರವಾಡ ಜಿಲ್ಲೆಯಿಂದ ಹತ್ತಿ ರಫ್ತಾಗುತ್ತಿತ್ತು. ಉತ್ತರ ಕರ್ನಾಟಕದ ಹವಾಮಾನವು ಆಹಾರ ಪದಾರ್ಥಗಳ ಬೆಳೆಗೆ ಉತ್ತಮವಾಗಿದೆ ಎಂದು ಪ್ರಶಂಸಿದರು. ಇದನ್ನೂ ಓದಿ: ನೀರು ಮಿಕ್ಸ್ ಮಾಡಿ ಪೆಟ್ರೋಲ್, ಡೀಸೆಲ್ ಮಾರಾಟ – ರೊಚ್ಚಿಗೆದ್ದ ಜನ
ಈ ಸಂದರ್ಭದಲ್ಲಿ ಡಿ.ಜಿ.ಎಫ್.ಟಿ ಸಹಾಯಕ ನಿರ್ದೇಶಕಿ ಗೀತಾ.ಕೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಗೌರವ ಕಾರ್ಯದರ್ಶಿ ಅಶೋಕ ಗಡಾದ, ವಾಣಿಜ್ಯೋದ್ಯಮ ಮಂಡಳಿ ಮಾಜಿ ಅಧ್ಯಕ್ಷ ರಮೇಶ್ ಪಾಟೀಲ್, ಮಂಡಳಿ ಉಪಾಧ್ಯಕ್ಷ ವಿನಯ್ ಜವಳಿ, ವಾಣಿಜ್ಯೋದ್ಯಮ ಸಂಸ್ಥೆ ಜಂಟಿ ನಿರ್ದೇಶಕ ಉಮೇಶ್ ಗಡಾದ, ಬ್ಯಾಂಕ್ ಆಫ್ ಬರೋಡಾ ವ್ಯವಸ್ಥಾಪಕ ಅಣ್ಣಯ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.