ಲಂಡನ್: ಇತ್ತೀಚೆಗೆ ಪಾಕಿಸ್ತಾನ (Pakistan) ತನ್ನ ದೇಶದ ಮೇಲೆಯೇ ನಡೆಸಿದ ವಾಯುದಾಳಿಯಲ್ಲಿ 30 ಮಂದಿ ನಾಗರಿಕರು ಬಲಿಯಾಗಿರುವ ಘಟನೆಯನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ (UNHRC) ಸಭೆಯಲ್ಲಿ ಭಾರತ ತೀವ್ರವಾಗಿ ಖಂಡಿಸಿದೆ.
BREAKING: Indian Diplomat Kshitij Tyagi at UN Human Rights Council exposes Pakistan for bombing their own people in KPK yesterday apart from persecution, human rights violations and illegally occupying Indian territory.
pic.twitter.com/SEaWsmQIzD
— IndiaWarZone (@IndiaWarZone) September 23, 2025
ತನ್ನ ದೇಶದಲ್ಲೇ ವೈಮಾನಿಕ ದಾಳಿ ನಡೆಸಿದ ಪಾಕ್ ನಡೆಗೆ ಭಾರತ ಪ್ರತಿಕ್ರಿಯಿಸಿದೆ. ಜಾಗತಿಕವಾಗಿ ಅಸ್ಥಿರತೆ ಉಂಟುಮಾಡಲು ಭಯೋತ್ಪಾದನೆ ರಫ್ತು ಮಾಡುತ್ತದೆ. ಈಗ ನೋಡಿದ್ರೆ ತನ್ನ ಸ್ವಂತ ನಾಗರಿಕರ ಮೇಲೆಯೇ ಬಾಂಬ್ ದಾಳಿ ಮಾಡಿದೆ. ಭಯೋತ್ಪಾದನೆಯ ಪ್ರಚಾರಕ್ಕಾಗಿ ಅಂತಾರಾಷ್ಟ್ರೀಯ ವೇದಿಕೆಗಳನ್ನ ದುರುಪಯೋಗಪಡಿಸಿಕೊಂಡಿದೆ. ಎಂದು UNHRCಯಲ್ಲಿನ ಭಾರತೀಯ ಪ್ರತಿನಿಧಿ ಕ್ಷಿತಿಜ್ ತ್ಯಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್ ಒಳಗಡೆಯೇ ಏರ್‌ಸ್ಟ್ರೈಕ್ – 7 ಬಾಂಬ್‌ಗೆ 30 ಮಂದಿ ಬಲಿ
ಕಾರ್ಯಸೂಚಿ ಐಟಂ-4ರ ವೇಳೆ ಮಾತನಾಡುವಾಗ, ಸೋಮವಾರ ಬೆಳಗ್ಗಿನ ಜಾವ ಜೆಎಫ್ -17 ಪಾಕಿಸ್ತಾನಿ ಯುದ್ಧ ವಿಮಾನಗಳು ತನ್ನ ಮಾಟ್ರೆ ದಾರಾ ಗ್ರಾಮದ ಮೇಲೆ 8 SL-6 ಬಾಂಬ್‌ಗಳ ಮೂಲಕ ವಾಯುದಾಳಿ ನಡೆಸಿದೆ. ಆ ದಾಳಿಯಲ್ಲಿ ಮಹಿಳೆಯರು ಮಕ್ಕಳು ಸೇರಿ 30 ಮಂದಿ ಬಲಿಯಾಗಿದ್ದಾರೆ ಎಂಬ ಅಂಶವನ್ನು ಉಲ್ಲೇಖಿಸಿದರು.
ನಮ್ಮ ಪ್ರದೇಶವನ್ನು ಅಪೇಕ್ಷಿಸುವ ಬದಲು, ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಭಾರತೀಯ ಪ್ರದೇಶವನ್ನು ಖಾಲಿ ಮಾಡಬೇಕು ಎಂದರಲ್ಲದೇ ಭಯೋತ್ಪಾದನೆ ರಫ್ತು ಮಾಡುವುದರಿಂದ, ತಮ್ಮದೇ ಜನರ ಮೇಲೆ ಬಾಂಬ್ ದಾಳಿ ಮಾಡುವುದರಿಂದ, ವಿಶ್ವಸಂಸ್ಥೆ ಗುರುತಿಸಿದ ಉಗ್ರರಿಗೆ ಆಶ್ರಯ ನೀಡುವುದರಿಂದ ಸಮಯ ಸಿಕ್ಕರೆ ಜೀವ ಬೆಂಬಲದ ಮೇಲೆ ಆರ್ಥಿಕತೆ ಸುಧಾರಿಸುವತ್ತ ಗಮನಹರಿಸಬೇಕು. ಆದ್ರೆ ಪಾಕಿಸ್ತಾನಕ್ಕೆ ಸಮಯ ಸಿಕ್ಕರೆ ತನ್ನದೇ ದೇಶದ ನಾಗರಿಕೆ ಮೇಲೆ ದಾಳಿ ಮಾಡುವ ಕೆಲಸವನ್ನು ಮಾಡುತ್ತಿದೆ ಎಂದು ವಾಗ್ತಾಳಿ ನಡೆಸಿದರು. ಇದನ್ನೂ ಓದಿ: ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತಕ್ಕೆ 14 ಬಲಿ, 124 ಮಂದಿ ಮಿಸ್ಸಿಂಗ್
ಮುಂದುವರಿದು.. ಪುಲ್ವಾಮಾ, ಉರಿ, ಪಠಾಣ್‌ಕೋಟ್ ಮತ್ತು ಮುಂಬೈ ಸೇರಿದಂತೆ ಹಿಂದಿನ ದಾಳಿಗಳು ಹಾಗೂ ಪಹಲ್ಗಾಮ್ ದಾಳಿಯನ್ನು ಉಲ್ಲೇಖಿಸಿ ಪಾಕ್ ವಿರುದ್ಧ ಕಿಡಿ ಕಾರಿದರು.