ಶ್ರೀನಗರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು (Central Government) ಕಾಶ್ಮೀರದಲ್ಲಿ ಹಿಂದುತ್ವ ಅಜೆಂಡಾ ಪ್ರಚಾರ ಮಾಡುತ್ತಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮುಖ್ಯಸ್ಥೆ ಮೆಹಬೂಬಾ ಮುಫ್ತಿ (Mehbooba Mufti) ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿರುವ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು (Students) `ರಘುಪತಿ ರಾಘವ ರಾಜಾ ರಾಂ’ ಹಾಡುತ್ತಿರುವ ವೀಡಿಯೋವನ್ನು (Viral Video) ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ಮುಫ್ತಿ, ಇದು ಕೇಂದ್ರ ಸರ್ಕಾರದ ಹಿಂದುತ್ವ (Hindutva) ಅಜೆಂಡಾವನ್ನು ಸೂಚಿಸುತ್ತದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ತೆರವು ಪ್ರಹಸನಕ್ಕೆ ಬಿತ್ತಾ ಬ್ರೇಕ್..?- ವಿಲ್ಲಾಗಳ ಕಡೆ ಮುಖಮಾಡದ ಜೆಸಿಬಿ!
Advertisement
Jailing religious scholars, shutting down Jama Masjid & directing school kids here to sing Hindu hymns exposes the real hindutva agenda of GOI in Kashmir. Refusing these rabid dictates invites PSA & UAPA. It is the cost that we are paying for this so called “Badalta J&K”. pic.twitter.com/NssOcDP4t6
— Mehbooba Mufti (@MehboobaMufti) September 19, 2022
Advertisement
`ಧಾರ್ಮಿಕ ವಿದ್ವಾಂಸರನ್ನು ಜೈಲಿಗಟ್ಟುವುದು, ಜಮ್ಮಾ ಮಸೀದಿಯನ್ನು (Jama Masjid) ಮುಚ್ಚುವುದು ಮತ್ತು ಶಾಲಾ ಮಕ್ಕಳಿಗೆ ಹಿಂದೂ ಸ್ತೋತ್ರ ಹಾಡಲು ನಿರ್ದೇಶಿಸುವುದು ಕಾಶ್ಮೀರದಲ್ಲಿ ಭಾರತ ಸರ್ಕಾರದ ನಿಜವಾದ ಹಿಂದುತ್ವವನ್ನು ಬಿಂಬಿಸಿದೆ ಎಂದು ಮುಫ್ತಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
Advertisement
1 ನಿಮಿಷ 45 ಸೆಕೆಂಡುಗಳಿರುವ ಈ ವೀಡಿಯೋನಲ್ಲಿ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರ ಧರಿಸಿಯೇ `ರಘುಪತಿ ರಾಘವ ರಾಜಾ ರಾಂ’ (Raghupati Raghav Raja Ram) ಭಜನೆಯನ್ನು ಪಠಿಸುತ್ತಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣ – ಬಾಯ್‌ಫ್ರೆಂಡ್‌ಗೆ ಹೆದರಿ ವೀಡಿಯೋ ಮಾಡಿದ್ಲು ಸಹಪಾಠಿ
Advertisement
ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ (BJP Leader) ಕವೀಂದರ್ ಗುಪ್ತಾ, ಮುಫ್ತಿಯವರು ಎಲ್ಲವನ್ನೂ ವಿವಾದಾತ್ಮಕವಾಗಿ ಪ್ರಯತ್ನಿಸುತ್ತಿದ್ದಾರೆ. ಕಾಶ್ಮೀರದ ಶಾಲೆಯೊಂದರಲ್ಲಿ ಹಾಡಿದ ಭಜನೆಯನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಈ ಭಜನಾ ಗೀತೆಯಲ್ಲಿ `ಈಶ್ವರ ಅಲ್ಲಾ ತೇರೋ ನಾಮ್, ಸಬ್ಕೋ ಸನ್ಮತಿ ದೇ ಭಗವಾನ್’ ಕೂಡ ಇದೆ. ಮೆಹಬೂಬಾ ಮುಫ್ತಿಗೆ ಈ ಸನ್ಮತಿ ಸಿಗಲಿ ಎಂದು ಕುಟುಕಿದ್ದಾರೆ.