ಆಗಸ್ಟ್‌ 1 ರಿಂದ ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ನಿಷೇಧ – ಅಲೋಕ್ ಕುಮಾರ್

Public TV
2 Min Read
Bengaluru Mysuru

– ರಸ್ತೆ ನ್ಯೂನತೆ ಸರಿಪಡಿಸದಿದ್ರೆ ಕಠಿಣ ಕ್ರಮ ಎಂದ ಅಲೋಕ್ ಕುಮಾರ್

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Mysuru Expressway) ಅಪಘಾತ ತಡೆಯಲು ಪೊಲೀಸ್‌ ಇಲಾಖೆ ಮುಂದಾಗಿದ್ದು ಮಂಗಳವಾರ (ಜು.25) 2ನೇ ಬಾರಿಗೆ ಎಡಿಜಿಪಿ ಅಲೋಕ್ ಕುಮಾರ್ (Alok Kuma) ಹೆದ್ದಾರಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ತಿಂಗಳು ಹೆದ್ದಾರಿ ಪರಿಶೀಲನೆ ಮಾಡಿ ಹಲವು ನ್ಯೂನತೆಗಳನ್ನ ಸರಿಪಡಿಸುವಂತೆ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಒಂದು ತಿಂಗಳ ಗಡುವು ನೀಡಿದ್ದರು‌. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಹೆದ್ದಾರಿ ಪರಿಶೀಲನೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ‌. ಇದನ್ನೂ ಓದಿ: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸುವ ಷಡ್ಯಂತ್ರದ ಬಗ್ಗೆ ತಿಳಿದಿಲ್ಲ: ಸಿಎಂ

ALOK KUMAR 1 1

ಬಳಿಕ ಮಾತನಾಡಿದ ಅಲೋಕ್‌ ಕುಮಾರ್, ಇದೇ ಆಗಸ್ಟ್‌ 1 ರಿಂದ ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಿಗೆ ನಿಷೇಧ (Two-Wheelers, Three-Wheelers Banned) ಹೇರಲಾಗುವುದು. ಈ ಬಗ್ಗೆ ಕಳೆದ ಜು.12ರಂದೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಆ.1 ರಿಂದ ನೂತನ ನಿಯಮ ಅನ್ವಯ ಆಗಲಿದೆ ಎಂದು ತಿಳಿಸಿದ್ದಾರೆ.

ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಇನ್ನೂ ಸಾಕಷ್ಟು ನ್ಯೂನತೆಗಳು ಹಾಗೆ ಇವೆ. ಅಪಘಾತ ತಡೆಗೆ ಪೊಲೀಸ್ ಇಲಾಖೆ ಸಾಕಷ್ಟು ಕೆಲಸ ಮಾಡಿದೆ. ಹಾಗಾಗಿ ಸಾವಿ‌ನ ಸಂಖ್ಯೆ ಕಡಿಮೆ ಆಗಿದೆ. ಆದ್ರೆ ಹೆದ್ದಾರಿ ಪ್ರಾಧಿಕಾರ ಎಂಟ್ರಿ, ಎಕ್ಸಿಟ್‌ ಸರಿಪಡಿಸುವುದು, ಸ್ಕೈವಾಕ್‌ ನಿರ್ಮಾಣ ಮಾಡಬೇಕಿದೆ. ನಾವು ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ ಇರುವ ಸೌಲಭ್ಯ ಬಳಸಿಕೊಂಡು ಕೆಲಸ ಮಾಡುತ್ತಿದ್ದೇವೆ. ಸರ್ಕಾರದ ಮಟ್ಟದಲ್ಲಿ ಟೆಂಡರ್‌ ಆಗಿರೋದ್ರಿಂದ ಹೊಸ ಉಪಕರಣಗಳು ಬರೋದು ತಡವಾಗುತ್ತದೆ. ಹೆದ್ದಾರಿ ಪ್ರಾಧಿಕಾರಕ್ಕೂ ಕಠಿಣ ಸೂಚನೆ ನೀಡಲಾಗಿದೆ. ಪ್ರಾಧಿಕಾರ ಸುಮ್ಮನೆ ಆಟ ಆಡಿದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಚಿತ್ರೀಕರಣ – ಧ್ವನಿ ಎತ್ತಿದ ಯುವತಿಗೆ ಪೊಲೀಸರಿಂದ ಕಿರುಕುಳ ಆರೋಪ

Soon Two wheelers three wheelers banned on Bengaluru Mysuru Expressway to reduce accidents

ಇದೇ ತಿಂಗಳ ಜುಲೈ 12ರಂದೇ ರಾಷ್ಟ್ರೀಯ ಹೆದ್ದಾರಿ ನಿಯಂತ್ರಣ ಕಾಯ್ದೆ 2002ರ ಅನ್ವಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಹೊರಡಿಸಿತ್ತು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ತಡೆಯಲು ದ್ವಿಚಕ್ರ, ತ್ರಿಚಕ್ರ ಸೇರಿ ಕೆಲ ವಾಹನಗಳಿಗೆ ನಿಷೇಧ ಹೇರುವ ತೀರ್ಮಾನ ಮಾಡಿರುವುದಾಗಿ ಅಧಿಸೂಚನೆಯಲ್ಲಿ ತಿಳಿಸಿತ್ತು. ದಶಪಥ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ವೇಗಮಿತಿ ನಿಗದಿ ಮಾಡಲಾಗಿದ್ದು ಗಂಟೆಗೆ 80 ರಿಂದ 100 ಕಿ.ಮೀಗೆ ಮಿತಿ ಹೇರಿರುವ ಕುರಿತು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಯಾವೆಲ್ಲಾ ವಾಹನಗಳಿಗೆ ನಿರ್ಬಂಧ?
– ಮೋಟರ್ ಸೈಕಲ್​​ (ಸ್ಕೂಟರ್ ಮತ್ತು ಇತರೆ ದ್ವಿಚಕ್ರವಾಹನ)
– ತ್ರಿಚಕ್ರವಾಹನ (ಆಟೋ ರಿಕ್ಷಾ, ಇ-ಕಾರ್ಟ್ ವಾಹನಗಳು)
– ಮೋಟಾರು ರಹಿತ ವಾಹನಗಳು, ಸೈಕಲ್‌ಗಳು
– ಟ್ರಾಕ್ಟರ್‌ಗಳು, ಮಲ್ಟಿ ಆಕ್ಸೆಲ್‌ ಹೈಡ್ರಾಲಿಕ್ ಟ್ರೇಲರ್‌ ವಾಹನಗಳು

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article