– ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ತೀರ್ಮಾನ
ಬೆಂಗಳೂರು: ಇಲ್ಲಿನ ಜೆ.ಪಿ ಭವನದಲ್ಲಿ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡರ (HD DeveGowda) ನೇತೃತ್ವದಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಸಿ.ಎಂ ಇಬ್ರಾಹಿಂ (CM Ibrahim) ಅವರನ್ನು ಅಧಿಕೃತವಾಗಿ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಇಬ್ರಾಹಿಂ ಅವರನ್ನು ಉಚ್ಚಾಟನೆಗೊಳಿಸಲಾಗಿದೆ. ಇದನ್ನೂ ಓದಿ: ಕುಮಾರಸ್ವಾಮಿ ಬಿಜೆಪಿಯವರಿಗೆ ಬಕೆಟ್ ಹಿಡಿಯಲು ಹೋಗಿದ್ದಾರೆ: ಸಿಎಂ ಇಬ್ರಾಹಿಂ
Advertisement
Advertisement
2024ರ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ (BJP-JDS Alliance) ಘೋಷಣೆಯಾದಾಗಿನಿಂದಲೂ ಇಬ್ರಾಹಿಂ ಅವರು ಪಕ್ಷದ ವಿರುದ್ಧ, ಪಕ್ಷದ ನಾಯಕರಾದ ದೇವೇಗೌಡ, ಕುಮಾರಸ್ವಾಮಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕೇರಳ ಸೇರಿದಂತೆ ವಿವಿಧ ಸಂಘಟನೆಗಳ ಜೊತೆ ಪಕ್ಷಕ್ಕೆ ವಿರುದ್ಧವಾಗಿ ಸಭೆ ಮಾಡಿದ್ದಾರೆ. ಅಲ್ಲದೇ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದ್ದರೂ ನಮ್ಮದೇ ಒರಿಜಿನಲ್ ಜೆಡಿಎಸ್ ಅಂತ ಪದೇ ಪದೇ ಹೇಳಿಕೊಂಡು ಬಂದಿದ್ದಾರೆ. ಈ ಎಲ್ಲ ಆರೋಪಗಳನ್ನು ಆಧಾರವಾಗಿಟ್ಟುಕೊಂಡು ಒಮ್ಮತದ ತೀರ್ಮಾನದೊಂದಿಗೆ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆಗೊಳಿಸಲಾಗಿದೆ.
Advertisement
ಇಬ್ರಾಹಿಂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ ಎಂದು ಇತ್ತೀಚೆಗೆ ಅವರನ್ನು ಅಮಾನತುಗೊಳಿಸಲಾಗಿತ್ತು. ಇಂದು (ಶನಿವಾರ) ಪಕ್ಷದಿಂದ ಉಚ್ಚಾಟನೆಗೊಳಿಸಿರುವುದಾಗಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ಸಭೆಯ ಬಳಿಕ ತಿಳಿಸಿದ್ದಾರೆ. ಇದನ್ನೂ ಓದಿ: Breaking: ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಮಾನತು – ದೊಡ್ಡಗೌಡರ ಆದೇಶ
Advertisement
ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ಸಂಸದ ಪ್ರಜ್ವಲ್ ರೇವಣ್ಣ ಮಾತ್ರವಲ್ಲದೇ ಪಂಜಾಬ್, ಯುಪಿ, ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ಪಶ್ಚಿಮ ಬಂಗಾಳದ ಜೆಡಿಎಸ್ ರಾಜ್ಯಾಧ್ಯಕ್ಷರು, ಕಾರ್ಯಾಧ್ಯಕ್ಷರು ಭಾಗಿಯಾಗಿದ್ದರು.