ಬೆಂಗಳೂರು: 2024ನೇ ಸಾಲಿನ ಎರಡನೇ ವರ್ಷದ/ಮೂರನೇ ಸೆಮಿಸ್ಟರ್‌ನ ಎಂಜಿನಿಯರಿಂಗ್ ಕೋರ್ಸುಗಳ (Engineering Course) ಪ್ರವೇಶಕ್ಕಾಗಿ ಡಿಸಿಇಟಿ-24ಕ್ಕೆ (DCET-24) ನೋಂದಣಿ ಮಾಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದೇ ಇರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಮೇ 31ರವರೆಗೆ ಕೊನೆ ಅವಕಾಶ ನೀಡಲಾಗಿದೆ.
ಶುಲ್ಕ ಪಾವತಿಸಿದ್ದು, ಆದರೆ ಪಾವತಿ ವಿಫಲವಾದ ಕಾರಣ ಬ್ಯಾಂಕಿನಿಂದ ಹಿಂತಿರುಗಿಸಲಾಗಿರುವ ಅಭ್ಯರ್ಥಿಗಳೂ ಸಹ ಮತ್ತೊಮ್ಮೆ ಶುಲ್ಕ ಪಾವತಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅಧಿಕಾರಿ ಆತ್ಮಹತ್ಯೆ ಪ್ರಕರಣ: ನಾಗೇಂದ್ರ ರಾಜೀನಾಮೆ, ಕೇಂದ್ರ ಏಜೆನ್ಸಿಯಿಂದ ತನಿಖೆಗೆ ಗೋವಿಂದ ಕಾರಜೋಳ ಆಗ್ರಹ
ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್ ಅನ್ನು ನೋಡಲು ಕೋರಲಾಗಿದೆ. ಇದನ್ನೂ ಓದಿ: ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಬೆಂಬಲ: ಅಶ್ವಥ್ ನಾರಾಯಣ್ ಮನವಿ