ಬೆಳಗಾವಿ: ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ-ಮೈಸೂರು ಎಕ್ಸ್‌ಪ್ರೆಸ್ ರೈಲನ್ನು (Dharwad-Mysuru Express Train) ಬೆಳಗಾವಿಯವರೆಗೆ (Belagavi) ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ (Eranna Kadadi) ಹೇಳಿದರು.
ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ ಸಂಸದ ಈರಣ್ಣ ಕಡಾಡಿ, ರೈಲು ಸಂಖ್ಯೆ 17302 ಬೆಳಗಾವಿಯಿಂದ ರಾತ್ರಿ 07:45 ಗಂಟೆಗೆ ಹೊರಟು ಮರುದಿನ ಮುಂಜಾನೆ 07:10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10:30 ಗಂಟೆಗೆ ಹೊರಟು ಮರುದಿನ ಮುಂಜಾನೆ 10:45 ಗಂಟೆಗೆ ಬೆಳಗಾವಿಗೆ ತಲುಪಲಿದೆ. ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್ ರೈಲು ತನ್ನ ಸಂಚಾರ ಆರಂಭಿಸಲಿದೆ ಎಂದರು. ಇದನ್ನೂ ಓದಿ: 2A ಮೀಸಲಾತಿಗಾಗಿ ಸೆ.10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭ: ಕೂಡಲಸಂಗಮ ಶ್ರೀ
ನನ್ನ ಮನವಿಗೆ ಸ್ಪಂದಿಸಿ ಬೆಳಗಾವಿ-ಮೈಸೂರು ಎಕ್ಸ್‌ಪ್ರೆಸ್ ರೈಲು ಪ್ರಾರಂಭಿಸಲು ಅನುಮತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು. ಇದನ್ನೂ ಓದಿ: ಪ್ರಧಾನಿ ಮೋದಿ ಇನ್ನೂ ತಮ್ಮ ಪೂರ್ವಾಶ್ರಮ RSS ಗುಂಗಿನಲ್ಲಿದ್ದಂತಿದೆ – ಸಿದ್ದರಾಮಯ್ಯ ಕಿಡಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]