ನವದೆಹಲಿ: ದೇಶವು ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಮಹತ್ವದ ಘೋಷಣೆ ಮಾಡಿದ್ದಾರೆ. ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Pradhan Mantri Garib Kalyan Anna Yojana) ಮುಂದಿನ ಐದು ವರ್ಷಕ್ಕೆ ವಿಸ್ತರಿಸಲಾಗುವುದು ಎಂದು ಮೋದಿ ಹೇಳಿದರು.
ಛತ್ತೀಸ್‌ಗಢದಲ್ಲಿ (Chattisgarh) ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಘೋಷಣೆ ಮಾಡಿದ್ದಾರೆ. ಬಿಜೆಪಿ (BJP) ಸರ್ಕಾರವು ಮುಂದಿನ 5 ವರ್ಷಗಳವರೆಗೆ ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರವನ್ನು ಒದಗಿಸುವ ಯೋಜನೆಯನ್ನು ವಿಸ್ತರಿಸಲು ನಾನು ನಿರ್ಧರಿಸಿದ್ದೇನೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದವು ಯಾವಾಗಲೂ ಪವಿತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ನನಗೆ ಶಕ್ತಿಯನ್ನು ನೀಡುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದೇ ತಿಂಗಳಲ್ಲಿ ಮೂರು ಬಾರಿ ಕಂಪನ- ದೆಹಲಿಯಲ್ಲಿ ನಿರಂತರ ಭೂಕಂಪನಕ್ಕೆ ಕಾರಣವೇನು?
Advertisement
Advertisement
ಇದೇ ವೇಳೆ ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಆರ್ಥಿಕ ಲಾಭಗಳಿಗೆ ಆದ್ಯತೆ ನೀಡುತ್ತಿದೆ ಮತ್ತು ಆಗಾಗ ಭ್ರಷ್ಟ ಚಟುವಟಿಕೆಗಳಲ್ಲಿ ತೊಡಗಿದೆ. ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ದೇಶದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಪರಿಚಯಿಸಲಾಯಿತು. ಇದರ ಅಡಿಯಲ್ಲಿ ಸರ್ಕಾರವು ಪ್ರತಿ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು ಉಚಿತವಾಗಿ ಪೂರೈಸುತ್ತಿದೆ. ಇದನ್ನೂ ಓದಿ: ದೀಪಾವಳಿ ಪ್ರಯುಕ್ತ ಉದ್ಯೋಗಿಗಳಿಗೆ ಕಾರುಗಳನ್ನು ಗಿಫ್ಟ್ ನೀಡಿದ ಕಂಪನಿ!
Advertisement
ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶುಕ್ರವಾರ ರಾಯ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಂಬರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆಯನ್ನು (Manifesto) ಬಿಡುಗಡೆ ಮಾಡಿದರು. ‘ಮೋದಿ ಕೀ ಗ್ಯಾರಂಟಿ 2023’ ಎಂಬ ಶೀರ್ಷಿಕೆಯ ಪ್ರಣಾಳಿಕೆಯು ಆರೋಗ್ಯ ವಿಮಾ ಯೋಜನೆಗಳು, ಅಡುಗೆ ಅನಿಲ ಸಬ್ಸಿಡಿಗಳು ಮತ್ತು ರಾಜ್ಯದ ಬಡ ಜನರಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಪ್ರಾಯೋಜಿತ ಭೇಟಿ ಸೇರಿದಂತೆ ಇತರ ಭರವಸೆಗಳನ್ನು ಒಳಗೊಂಡಿದೆ. ಇದನ್ನೂ ಓದಿ: ದೆಹಲಿಯಲ್ಲಿ ವಿಷವಾಗುತ್ತಿದೆಯಾ ಉಸಿರಾಡುವ ಗಾಳಿ? – ಪರಿಶೀಲನೆಗೆ 1,119 ಅಧಿಕಾರಿಗಳ 517 ತಂಡ ರಚನೆ
Advertisement
ಹೂಡಿಕೆಯನ್ನು ಆಕರ್ಷಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ‘ಇನ್ವೆಸ್ಟ್ ಛತ್ತೀಸ್‌ಗಢ’ ಉಪಕ್ರಮವು ಪ್ರಣಾಳಿಕೆಯ ಪ್ರಮುಖ ಹೈಲೈಟ್ ಆಗಿದೆ. ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸುವ ಮೂಲಕ ಛತ್ತೀಸ್‌ಗಢ ಸಾರ್ವಜನಿಕ ಸೇವಾ ಆಯೋಗಕ್ಕೆ (ಸಿಜಿಪಿಎಸ್‌ಸಿ) ಪಾರದರ್ಶಕತೆಯನ್ನು ತರಲು ಬಿಜೆಪಿ ಯೋಚಿಸಿದೆ. ಇದನ್ನೂ ಓದಿ: Nepal Earthquake: ಭೀಕರ ಭೂಕಂಪನಕ್ಕೆ ಬೆಚ್ಚಿಬಿದ್ದ ನೇಪಾಳ- 70 ಮಂದಿ ದುರ್ಮರಣ
Web Stories