ಗಾಂಧೀನಗರ: ವಿದೇಶಾಂಗ ಸಚಿವ ಎಸ್ ಜೈಶಂಕರ್ (Jai Shankar) ಅವರು ಸೋಮವಾರ (ಇಂದು) ರಾಜ್ಯಸಭಾ ಚುನಾವಣೆಗೆ (Elections to the Rajya Sabha from Gujarat.) ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ (Bhupendra Patel) ಮತ್ತು ಬಿಜೆಪಿ ಗುಜರಾತ್ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ (C. R Pateel) ಅವರು ಜೈಶಂಕರ್ ಅವರೊಂದಿಗೆ ರಾಜ್ಯ ವಿಧಾನಸಭೆ ಸಂಕೀರ್ಣಕ್ಕೆ ತೆರಳಿ ಚುನಾವಣಾಧಿಕಾರಿ ರೀಟಾ ಮೆಹ್ತಾ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
Advertisement
Advertisement
ಗೋವಾ, ಗುಜರಾತ್ ಮತ್ತು ಪಶ್ಚಿಮ ಬಂಗಾಳದ (West Bengal) 10 ಸ್ಥಾನಕ್ಕೆ ಜುಲೈ 24 ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜುಲೈ 13 ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜುಲೈ 17ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಇದನ್ನೂ ಓದಿ: ವಿಮಾನ ನಿಲ್ದಾಣಗಳಿಗೆ ಹೆಚ್ಚಿನ ಭದ್ರತೆ – ಅತ್ಯಾಧುನಿಕ ಸ್ಕ್ಯಾನರ್ ಖರೀದಿಗೆ ಕೇಂದ್ರ ನಿರ್ಧಾರ
Advertisement
It has been a real honour representing Gujarat in the Rajya Sabha. I am grateful for the opportunity to serve our motherland.
Today, I submit my nomination and seek the blessings of Gujarat once more.
राज्यसभा में गुजरात का प्रतिनिधित्व करना वास्तव में सम्मान की बात है। अपनी… pic.twitter.com/7dg4zkVjDx
— Dr. S. Jaishankar (@DrSJaishankar) July 10, 2023
Advertisement
ಗುಜರಾತ್‍ನ 11 ರಾಜ್ಯಸಭಾ ಸ್ಥಾನಗಳ ಪೈಕಿ ಬಿಜೆಪಿ 8 ಸ್ಥಾನಗಳನ್ನು ಹೊಂದಿದೆ. ಉಳಿದ ಸ್ಥಾನಗಳು ಕಾಂಗ್ರೆಸ್ ಪಾಲಾಗಿವೆ. ಬಿಜೆಪಿ ಹೊಂದಿರುವ 8 ಸ್ಥಾನಗಳ ಪೈಕಿ ಜೈಶಂಕರ್, ಜುಗಲ್ಜಿ ಠಾಕೋರ್ ಮತ್ತು ದಿನೇಶ್ ಅನವಾಡಿಯಾ ಅವರ ರಾಜ್ಯಸಭಾ ಅವಧಿಯು ಆಗಸ್ಟ್ 18 ರಂದು ಮುಕ್ತಾಯಗೊಳ್ಳಲಿದೆ. ಈ ಮೂರು ಸ್ಥಾನಗಳಿಗೆ ಪ್ರಸ್ತುತ ಚುನಾವಣೆ ನಡೆಯಲಿದೆ.
2022ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 182ರಲ್ಲಿ 156 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿತ್ತು. ಕಾಂಗ್ರೆಸ್ 17 ಸ್ಥಾನಗಳನ್ನು ಪಡೆದುಕೊಂಡರೆ, ಆಪ್ ಕೇವಲ 5 ಸ್ಥಾನಗಳನ್ನು ಪಡೆದುಕೊಂಡಿತ್ತು.
Web Stories