ಬೆಂಗಳೂರು: ನವೆಂಬರ್ ಅಂತ್ಯದಿಂದ ಡಿಸೆಂಬರ್‌ವರೆಗೂ ಅಧಿಕ ಚಳಿ ಇರಲಿದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ (C S Patil) ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಈ ವರ್ಷ ಚಳಿಗಾಲ ತೀವ್ರವಾಗುವ ಹೆಚ್ಚಿನ ಸಾಧ್ಯತೆ ಇದೆ. ಫೆಸಿಫಿಕ್ ಮಹಾಸಾಗರದಲ್ಲಿ ಮೇಲ್ಮೈ ಉಷ್ಣಾಂಶ ಕಡಿಮೆಯಾಗುವ ಹಿನ್ನೆಲೆಹೆಚ್ಚಿನ ಚಳಿ ಅನುಭವವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚಿತ್ರದುರ್ಗ| ಪತಿ ಸಾವಿನಿಂದ ಖಿನ್ನತೆ – ತಾಯಿ, ಮಗಳು ನೇಣಿಗೆ ಶರಣು
Advertisement
Advertisement
ಉಷ್ಣಾಂಶವು ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾಗುವುದಕ್ಕೆ ಲಾ-ನಿನೋ ಎಂದು ಕರೆಯುತ್ತಾರೆ. ಲಾ-ನಿನೋ ಪರಿಸ್ಥಿತಿಯಿದಾಗಿ ನವೆಂಬರ್ ಅಂತ್ಯದಿಂದ ಡಿಸೆಂಬರ್‌ವರೆಗೂ ಅಧಿಕ ಚಳಿ ಇರಲಿದ್ದು, ಈ ಚಳಿಯ ಅನುಭವ ಜನವರಿಯಿಂದ ಮಾರ್ಚ್ವರೆಗೂ ಕೂಡ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯು.ಟಿ.ಪಿ ಕಾಲುವೆ ಒಡೆದು 1 ತಿಂಗಳಾದ್ರೂ ದುರಸ್ತಿ ಮಾಡದ ಅಧಿಕಾರಿಗಳು- ಕಂಗಾಲಾದ ರೈತರು
Advertisement
Advertisement
ಉತ್ತರಭಾರತದಿಂದ ತಂಪು ಹವೆ ಬೀಳುವ ಪರಿಣಾಮ, ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ 8 ರಿಂದ 10 ಡಿಗ್ರಿ ಉಷ್ಣಾಂಶ ಇರಬಹುದು. ಬೆಂಗಳೂರಿನಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ 12 ರಿಂದ 14 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಚಳಿಗಾಲದಲ್ಲಿ ನಸುಕಿನ ಜಾವ 4 ಗಂಟೆಯಿಂದ ಬೆಳಗ್ಗೆ 8 ಗಂಟೆಯವರೆಗೂ ಶೀತದ ವಾತವರಣ ಇರಲಿದ್ದು, ಶೀತ -ಜ್ವರ ಹೆಚ್ಚಾಗಬಹುದು ಎಂದು ಅವರು ಮಾಹಿತಿ ನೀಡಿದರು. ಇದನ್ನೂ ಓದಿ: Tumakuru| ಶಾಲಾ ಶಿಕ್ಷಕಿಯ ವಾಹನ ಅಡ್ಡಗಟ್ಟಿ ಸರಗಳ್ಳತನ