ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಕರ್ನಾಟಕದ ಮಾರ್ಗರೇಟ್ ಆಳ್ವ (80) ಹೆಸರನ್ನು ಪ್ರಸ್ತಾಪಿಸಲಾಗಿದೆ.
Advertisement
ಎನ್‍ಡಿಎ ನಿನ್ನೆ ಜಗದೀಪ್ ಧನಕರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಒಂದು ದಿನ ಬಳಿಕ ವಿಪಕ್ಷಗಳೂ ಕೂಡ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಮಾರ್ಗರೇಟ್ ಆಳ್ವ ವಿಪಕ್ಷಗಳ ಒಮ್ಮತದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ. ಪ್ರತಿಪಕ್ಷಗಳ ಸಭೆಯ ಬಳಿಕ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ಮಾರ್ಗರೇಟ್ ಆಳ್ವ ಹೆಸರನ್ನು ಘೋಷಣೆ ಮಾಡಿದರು. ಇದನ್ನೂ ಓದಿ: ಉಪರಾಷ್ಟ್ರಪತಿ ಚುನಾವಣೆ – ಎನ್‍ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಆಯ್ಕೆ
Advertisement
Advertisement
ದೆಹಲಿಯಲ್ಲಿ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ನಿವಾಸದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಿತು. ಈ ಸಭೆಯ ಬಳಿಕ ಮಾರ್ಗರೇಟ್ ಆಳ್ವ ಹೆಸರನ್ನು ಫೈನಲ್‍ಗೊಳಿಸಲಾಗಿದೆ. ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಿಪಿಐಎಂ ನಾಯಕ ಸೀತಾರಾಂ ಯೆಚೂರಿ, ಶಿವಸೇನೆ ಮುಖಂಡ ಸಂಜಯ್ ರಾವತ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಬುಡಕಟ್ಟು ವಿರೋಧಿ ಎಂದು ಬ್ಯಾನರ್ಜಿ ವಿರುದ್ಧ 50,000 ಪೋಸ್ಟರ್ ಹಾಕಿದ ಬಿಜೆಪಿ
Advertisement
ಮೂಲತಃ ಮಂಗಳೂರಿವರಾದ ಮಾರ್ಗರೇಟ್ ಆಳ್ವ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಬಿಎ ಪದವಿ ಪಡೆದು ಬಳಿಕ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ವಕೀಲೆಯಾಗಿ ಸೇವೆ ಸಲ್ಲಿಸಿದ್ದರು. ಇದರೊಂದಿಗೆ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ, ಗೋವಾ, ಗುಜರಾತ್, ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲೆಯಾಗಿದ್ದರು. ಕಾಂಗ್ರೆಸ್‍ನ ಹಿರಿಯ ನಾಯಕಿಯಾಗಿರುವ ಆಳ್ವಾ ರಾಜ್ಯ ಸಭೆ, ಲೋಕ ಸಭಾ ಸದಸ್ಯೆಯಾಗಿ, ಕೇಂದ್ರ ಸಚಿವೆಯಾಗಿ ಕೆಲಸ ಮಾಡಿದ ಸುದೀರ್ಘ ರಾಜಕೀಯ ಮತ್ತು ಆಡಳಿತ ಅನುಭವ ಹೊಂದಿದ್ದಾರೆ.
ಉಪರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದ್ದು, ಜುಲೈ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಜುಲೈ 22 ಕೊನೆಯ ದಿನವಾಗಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ.
Live Tv
[brid partner=56869869 player=32851 video=960834 autoplay=true]