ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ ಕುರಿತಾಗಿ ಸುಳ್ಳು ಸುದ್ದಿ ಹಬ್ಬಿಸುವ ಫೇಸ್‍ಬುಕ್, ಟ್ವಿಟ್ಟರ್ ಖಾತೆ ಮೇಲೆ ರಷ್ಯಾ ನಿಷೇಧ ಹೇರಿದೆ.
ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ತಾರತಮ್ಯ ತೋರಿದೆ ಎಂದು ಆರೋಪಿಸಿರುವ ರಷ್ಯಾದ ಮಾಧ್ಯಮ ನಿಯಂತ್ರಕ ಫೇಸ್‍ಬುಕ್ ಹಾಗೂ ಟ್ವಿಟ್ಟರ್ ಜೊತೆಗೆ ಬಿಬಿಸಿ, ಆ್ಯಪಲ್ ಹಾಗೂ ಗೂಗಲ್ ಆ್ಯಪ್ ಸ್ಟೋರ್‌ಗಳ ಮೇಲೂ ನಿರ್ಬಂಧ ಹೇರಲಾಗಿದೆ. ಉಕ್ರೇನ್ ಸಂಘರ್ಷದ ವರದಿಗೆ ಸಂಬಂಧಿಸಿದಂತೆ ರಷ್ಯಾ ಮಾಧ್ಯಮಗಳ ಮೇಲೆ ಫೇಸ್‍ಬುಕ್ ಹಾಗೂ ಟ್ವಿಟ್ಟರ್ ನಿರ್ಬಂಧವನ್ನು ಹೇರಿತ್ತು. ಈ ತಾರತಮ್ಯ ಧೋರಣೆಯನ್ನು ಖಂಡಿಸಿರುವ ರಷ್ಯಾ, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: ಭಾರತದ ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ: ಎಂಇಎ
Advertisement
Advertisement
2020 ಅಕ್ಟೋಬರ್‌ನಿಂದ ರಷ್ಯಾದ ಮಾಧ್ಯಮಗಳ ಮೇಲೆ ನಿರ್ಬಂಧಕ್ಕೆ ಸಂಬಂಧಿಸಿದಂತೆ 26 ಪ್ರಕರಣ ಫೇಸ್‍ಬುಕ್ ದಾಖಲಿಸಿದೆ. ಕೆಲವು ನ್ಯೂಸ್ ಏಜೆನ್ಸಿ ಮೇಲಿನ ಇತ್ತೀಚಿನ ನಿರ್ಬಂಧಗಳು ಇದು ಒಳಗೊಂಡಿವೆ. ಈ ನಡುವೆ ಫೇಸ್‍ಬುಕ್ ಮೇಲಿನ ನಿರ್ಬಂಧ ತೆರವುಗೊಳಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತದೆ ಎಂದು ಮೆಟಾ ಅಧ್ಯಕ್ಷ ನಿಕ್ ಕ್ಲೆಗ್ ತಿಳಿಸಿದ್ದಾರೆ. ಇದನ್ನೂ ಓದಿ: ಕದನ ವಿರಾಮ ಘೋಷಿಸಿ: ರಷ್ಯಾ, ಉಕ್ರೇನ್‌ಗೆ ಭಾರತ ಮನವಿ
Advertisement
Advertisement
ಉಕ್ರೇನ್ ಯುದ್ಧಕ್ಕೆ ಸಂಬಂಧಪಟ್ಟಂತೆ ನಕಲಿ ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆದೇಶಿಸಿದ್ದಾರೆ.