ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಫೇಶಿಯಲ್ ಅಟೆಂಡೆನ್ಸ್ : ಮಧು ಬಂಗಾರಪ್ಪ

Public TV
1 Min Read
Madhu Bangarappa

ಬಾಗಲಕೋಟೆ: ಇನ್ಮುಂದೆ ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್ (Facial Attendance) ಜಾರಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

ಇದು ಡಿಜಿಟಲ್ (Digital) ಯುಗ ಆಗಿರುವ ಕಾರಣ ಶಿಕ್ಷಣ ಇಲಾಖೆಯಲ್ಲಿ ಈ ವರ್ಷವೇ ಕೆಲ ಬದಲಾವಣೆ ಮಾಡಲಿದ್ದೇವೆ. ಒಂದೆರಡು ತಿಂಗಳಲ್ಲಿ ಈ ಬದಲಾವಣೆ ನಿಮಗೆ ಗೊತ್ತಾಗಲಿದೆ ಎಂದರು.

ಈಗಾಗಲೇ ಫೇಶಿಯಲ್‌ ಅಟೆಂಡೆನ್ಸ್ ಬೇರೆ ರಾಜ್ಯದಲ್ಲಿ ಜಾರಿ ಮಾಡಲಾಗಿದೆ. ನಾವು ಸ್ವಲ್ಪ ಹಿಂದೆ ಇದ್ದೇವೆ. ತಂತ್ರಜ್ಞಾನದ ಬಗ್ಗೆ ತಿಳುವಳಿಕೆ ಇದ್ದ ಕಾರಣ ಒಂದರಡು ತಿಂಗಳಿನಲ್ಲಿ ಜಾರಿ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಜಾತಿ ಗಣತಿ ಸಮೀಕ್ಷೆ – ಪ್ರಬಲ ಸಮುದಾಯದ ಒತ್ತಡಕ್ಕೆ ಮಣಿದ ʼಕೈʼಕಮಾಂಡ್

 

ರಾಜ್ಯದ ಸರ್ಕಾರಿ ಶಾಲೆಯ 25 ಸಾವಿರ ಮಕ್ಕಳಿಗೆ ಸಿಇಟಿ, ನೀಟ್ ತರಬೇತಿ ಕೊಡುತ್ತಿದ್ದೇವೆ. ಕಳೆದ ಬಾರಿಯಂತೆ ಈ ಬಾರಿಯೂ ಉಚಿತ ತರಬೇತಿಯನ್ನು ವಿಸ್ತರಣೆ ಮಾಡಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾದ ನಂತರ 16,500 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಆರ್‌ಸಿಬಿ ತಂಡವನ್ನು ಮಾರಾಟ ಮಾಡುತ್ತಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

Share This Article