ನವದೆಹಲಿ: ಈಗಾಗಲೇ ಕಾರ್ಯಾಂಗವನ್ನು ಅತಿಕ್ರಮಿಸಿರುವ ಆರೋಪ ನಮ್ಮ ಮೇಲಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದ ಪ್ರಸಂಗ ಇಂದು ನಡೆಯಿತು.
ವಕೀಲ ವಿಷ್ಣು ಶಂಕರ್ ಜೈನ್ (Vishnu Shankar Jain) ಅವರು ಪಶ್ಚಿಮ ಬಂಗಾಳದಲ್ಲಿ (West Bengal) ರಾಷ್ಟ್ರಪತಿ ಆಡಳಿತಕ್ಕೆ ಹೇರಲು ಆದೇಶಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಅವರ ದ್ವಿಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ನ್ಯಾ. ಗವಾಯಿ ಅವರು, ರಾಷ್ಟ್ರಪತಿ ಆಳ್ವಿಕೆ ಹೇರಲು ರಾಷ್ಟ್ರಪತಿಗಳಿಗೆ ಆದೇಶ ಹೊರಡಿಸಬೇಕೆಂದು ನೀವು ಬಯಸುತ್ತೀರಾ? ಎಂದು ಅರ್ಜಿದಾರರನ್ನು ಪ್ರಶ್ನಿಸಿದರು. ಅಷ್ಟೇ ಅಲ್ಲದೇ ಈಗಾಗಲೇ ಕಾರ್ಯಾಂಗವನ್ನು ಅತಿಕ್ರಮಿಸಿರುವ ಆರೋಪ ನಮ್ಮ ಮೇಲಿದೆ ಎಂದು ಸೂಚ್ಯವಾಗಿ ಹೇಳಿದರು. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ,ಕೋರ್ಟ್‌ಗಳು ಸೂಪರ್ ಪಾರ್ಲಿಮೆಂಟ್ ಆಗಬಾರದು: ಧನಕರ್ ಅಸಮಾಧಾನ
ನ್ಯಾ. ಗವಾಯಿ ಅವರ ಈ ಅಭಿಪ್ರಾಯ ಬಹಳ ಮಹತ್ವ ಪಡೆದುಕೊಂಡಿದೆ. ಮುಂದಿನ ತಿಂಗಳು ನ್ಯಾ. ಗವಾಯಿ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಲಿದ್ದು ವಕ್ಫ್ ಕಾಯ್ದೆಗೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ವಕೀಲ ವಿಷ್ಣು ಶಂಕರ್ ಜೈನ್ ಅವರು ಕಳೆದ ವಾರ ಸುಪ್ರೀಂ ಕೋರ್ಟ್ ವಕ್ಫ್ ಅರ್ಜಿ ವಿಚಾರಣೆ ನಡೆಸಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿಂದೆ ವಕ್ಫ್ ಕುರಿತದಾಗಿ ಹಿಂದೂಗಳು ಸಲ್ಲಿಸಿದಾಗ ಹೈಕೋರ್ಟ್‌ಗೆ ಹೋಗಿ ಎಂದಿತ್ತು. ಆದರೆ ಈಗ ಸುಪ್ರೀಂ ಕೋರ್ಟ್ ವಕ್ಫ್ ಕುರಿತಾದ ಅರ್ಜಿಗಳನ್ನು ವಿಚಾರಣೆ ನಡೆಸಿದ್ದಕ್ಕೆ ಮಾನದಂಡ ಏನು ಎಂದು ಪ್ರಶ್ನಿಸಿದ್ದರು. ಇದನ್ನೂ ಓದಿ: Waqf Act| ಹಿಂದೂಗಳು ಸಲ್ಲಿಸಿದಾಗ ಹೈಕೋರ್ಟ್‌ಗೆ ಹೋಗಿ ಎಂದಿತ್ತು – ಸುಪ್ರೀಂ ವಿಚಾರಣೆಗೆ ಮಾನದಂಡ ಏನು?- ವಕೀಲ ವಿಷ್ಣು ಶಂಕರ್ ಜೈನ್