ನವದೆಹಲಿ: ಟ್ವೀಟ್ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿ ಕಾನೂನು ಸಮರ ಎದುರಿಸಿದ್ದ ಫ್ಯಾಕ್ಟ್ ಚೆಕಿಂಗ್ ವೆಬ್‌ಸೈಟ್ ‘ಆಲ್ಟ್ ನ್ಯೂಸ್’ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಆರೋಪ ಮುಕ್ತರಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ ಬಿಡುಗಡೆ ನಂತರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಗೌರವಾನ್ವಿತ ನ್ಯಾಯಾಲಯವು ಯಾವುದೇ ನಿರ್ಬಂಧವನ್ನು ಹಾಕದ ಕಾರಣ ನಾನು ನನ್ನ ಕೆಲಸವನ್ನು ಎಂದಿನಂತೆ ಮುಂದುವರಿಸುತ್ತೇನೆ ಎಂದು ಜುಬೇರ್ ಹೇಳಿದ್ದಾರೆ. ಇದನ್ನೂ ಓದಿ: ಶೀಘ್ರವೇ ಷರೀಫ್-ಮೋದಿ ಭೇಟಿ ಸಾಧ್ಯತೆ
Advertisement
Advertisement
ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ, ನಾನು ಮೊದಲಿನಂತೆ ಕೆಲಸ ಮಾಡುತ್ತೇನೆ ಎಂದು ಮೊಹಮ್ಮದ್ ಜುಬೇರ್ ತಿಳಿಸಿದ್ದಾರೆ. ತಮ್ಮ ಟ್ವೀಟ್‌ಗಳ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೂನ್ 27 ರಂದು ಜುಬೇರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಉತ್ತರ ಪ್ರದೇಶದಲ್ಲಿ ಅವರ ವಿರುದ್ಧ ಇನ್ನೂ ಏಳು ಎಫ್‌ಐಆರ್‌ಗಳು ದಾಖಲಾಗಿವೆ.
Advertisement
ಬಂಧನದ ಅಧಿಕಾರವನ್ನು ಸರಿಯಾಗಿ ಬಳಿಸಿಕೊಳ್ಳಬೇಕು ಎಂಬುದು ಕಾನೂನು ತತ್ವವಾಗಿದೆ. ಪ್ರಸ್ತುತ ಪ್ರಕರಣದಲ್ಲಿ ಅವರನ್ನು ನಿರಂತರವಾಗಿ ಬಂಧನದಲ್ಲಿ ಇರಿಸುವುದು, ವಿವಿಧ ನ್ಯಾಯಾಲಯಗಳಲ್ಲಿ ಅಂತ್ಯವಿಲ್ಲದ ವಿಚಾರಣೆಗೆ ಒಳಪಡಿಸಲು ಯಾವುದೇ ಸಮರ್ಥನೆ ಇಲ್ಲ ಎಂದು ಜುಬೇರ್ ಬಿಡುಗಡೆ ಆದೇಶದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿತ್ತು. ಇದನ್ನೂ ಓದಿ: ಸದನದ ಕಲಾಪಕ್ಕೆ ಅಡ್ಡಿಪಡಿಸೋ ಮೂಲಕ ಕಾಂಗ್ರೆಸ್ ಸಂಸದರ ಹಕ್ಕು ಕಸಿಯುತ್ತಿದೆ: ಜೋಶಿ ಟೀಕೆ
Advertisement
ಮೊಹಮ್ಮದ್ ಜುಬೇರ್ ವಿರುದ್ಧ ಯುಪಿಯಲ್ಲಿ ವಿಶೇಷ ತನಿಖೆ ನಡೆಸುವುದನ್ನು ನ್ಯಾಯಾಲಯ ರದ್ದುಗೊಳಿಸಿತು. ಅವರ ವಿರುದ್ಧ ಯುಪಿಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಿತು. ಮೊಹಮ್ಮದ್ ಜುಬೇರ್ ಟ್ವೀಟ್ ಮಾಡುವುದನ್ನು ನಿಲ್ಲಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ಮನವಿಯನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದರು.