ಮುಂಬೈ: ವಿಷಾನಿಲ ಸೇವಿಸಿ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಈ ಘಟನೆ ಬರ್ಬನ್ ಘಾಟ್ ಕೋಪರ್ ಕೈಗಾರಿಕಾ ಪ್ರದೇಶದಲ್ಲಿ ಇಂದು ನಡೆದಿದೆ.
ರಾಮ್ ನಿವಾಸ್ ಸರೋದ್ (36)ಮೃತರಾಗಿದ್ದಾರೆ. ರೂಬಿನ್ ಸೋಲ್ಕರ್, ಸವಾರ್ಂಶ್ ಸೋನಾವನೆ ತೀವ್ರ ಅಸ್ವಸ್ಥರಾಗಿದ್ದು, ಬಿಎಂಸಿಯ ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆಯಲ್ಲಿ ವಿಷಾನಿಲ ಲೀಕ್ ಆಗಿರುವುದು ಈ ಅವಘಡಕ್ಕೆ ಕಾರಣವಾಗಿದೆ.
Advertisement
Advertisement
ಈಶಾನ್ಯ ಮುಂಬೈನ ಕುರ್ಲಾ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಬೆಳಗ್ಗೆ 8 ಗಂಟೆಗೆ ಮೆಥನಾಲ್ ಮತ್ತು ಸೈನೂರಿಕ್ ಕ್ಲೋರೈಡ್ ಅನಿಲ ಸೋರಿಕೆಯಾಗಿದೆ. ಈ ವೇಳೆ ಅಲ್ಲಿಯೇ ಇದ್ದ ರಾಮ್ ನಿವಾಸ್ ಸರೋದ್ ವಿಷಕಾರಿ ಅನಿಲವನ್ನು ಸೇವಿಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೂಬಿನ್ ಸೋಲ್ಕರ್, ಸರ್ವಾಂಶ್ ಸೋನಾವನೆ ತೀವ್ರ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ.ಇದನ್ನೂ ಓದಿ: ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ
Advertisement
Advertisement
ಅನಿಲ ಸೋರಿಕೆಗೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್