ಹಣಕ್ಕಾಗಿ ಬ್ಲ್ಯಾಕ್‍ಮೇಲ್ – ನಕಲಿ ಎಸಿಬಿ ಅಧಿಕಾರಿ ಅರೆಸ್ಟ್

Public TV
1 Min Read
fake acb haveri

ಹಾವೇರಿ: ಎಸಿಬಿ ಅಧಿಕಾರಿಗಳು ಭ್ರಷ್ಟರ ವಿರುದ್ಧ ದಾಳಿ ಮಾಡುತ್ತಿರುವುದನ್ನೇ ಬಂಡವಾಳ ಮಾಡಿಕೊಂಡ ಆಸಾಮಿ, ತಾನು ಎಸಿಬಿ ಅಧಿಕಾರಿ ಎಂದು ಹೇಳಿಕೊಂಡು ಜಿಲ್ಲೆಯ ರಾಣೆಬೆನ್ನೂರು ನಗರಸಭೆ ಅಧಿಕಾರಿಗಳನ್ನು ವಂಚನೆ ಮಾಡಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಬೆಂಗಳೂರಿನ ಹಲಸೂರು ನಿವಾಸಿಯಾದ ಜಾನಮೇಕ್ ಅಲಿಯಾಸ್ ಜಾನ್ ಮ್ಯಾಥ್ಯೂ ಪೊಲೀಸರ ಕೈಗೆ ಸಿಕ್ಕು ಜೈಲು ಸೇರಿದ ನಕಲಿ ಎಸಿಬಿ ಅಧಿಕಾರಿಯಾಗಿದ್ದಾನೆ. ಇದನ್ನೂ ಓದಿ: ಚಿತ್ರಮಂದಿರದೊಳಗೆ ಪಟಾಕಿ ಹೊಡಿಬೇಡಿ – ಅಭಿಮಾನಿಗಳಲ್ಲಿ ಸಲ್ಮಾನ್ ಖಾನ್ ಮನವಿ

fake acb haveri 1

ನಡೆದಿದ್ದೇನು?: ರಾಣೆಬೆನ್ನೂರು ನಗರಸಭೆಯ ಆಯುಕ್ತ ಉದಯಕುಮಾರ್ ತಳವಾರರ ಬಳಿ ಜಾನಮೇಕ್ ಬಂದಿದ್ದಾನೆ. ಈ ವೇಳೆ ನಗರಸಭೆ ಕಚೇರಿಯಲ್ಲಿ ಎಂಜನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹೇಶ್ ಗುಡಿಸಲಮನಿ ಅವರ ಹೆಸರು ಎಸಿಬಿ ಅಧಿಕಾರಿಗಳ ದಾಳಿ ಮಾಡುವ ಲಿಸ್ಟ್‍ನಲ್ಲಿದೆ ಎಂದು ಹೆದರಿಸಿದ್ದಾನೆ. ಆಗ ಜಾನಮೇಕ್ ನೀವು ಹಣ ನೀಡಿದರೆ ನಮ್ಮ ಮೇಲಿನ ಎಸಿಬಿ ಅಧಿಕಾರಿಗಳಿಗೆ ಹೇಳಿ ಅವರ ಹೆಸರನ್ನು ಆ ಲಿಸ್ಟ್‍ನಿಂದ ತೆಗೆಸುತ್ತೇನೆ ಎಂದು ಮೋಸದಿಂದ ಹಣ ಪಡೆಯಲು ಪ್ರಯತ್ನಿಸುತ್ತಾನೆ.

ಆಗ ಉದಯಕುಮಾರ್ ಅವರು ಜಾನಮೇಕ್ ನಕಲಿ ಎಸಿಬಿ ಅಧಿಕಾರಿ ಎಂಬುದನ್ನು ಅರಿತು ತಕ್ಷಣವೇ ರಾಣೆಬೆನ್ನೂರು ನಗರ ಠಾಣೆಯ ಪೊಲೀಸರ ಗಮನಕ್ಕೆ ತಂದು ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಕಿಚ್ಚು ಎಂದರೇನು – ಅಭಿಮಾನಿಗಳಿಗೆ ‘ಬೆಂಕಿ’ ಪ್ರಶ್ನೆ ಕೇಳಿದ ರಶ್ಮಿಕಾ

fake acb haveri 2

ನಕಲಿ ಎಸಿಬಿ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಜಾನಮೇಕ್ ನನ್ನು ಬಂಧಿಸಿದ್ದಾರೆ. ಬಂಧಿತನ ಮೇಲೆ ಐಪಿಸಿ ಸೆಕ್ಷನ್ 385, 418, 419, 420, 511 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಬಂಧಿತ ಆರೋಪಿ ಜಾನಮೇಕ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ವಿರುದ್ಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *