ರಾಯಚೂರು: ಜಿಲ್ಲೆಯ ಸರ್ಕಾರಿ ಅಧಿಕಾರಿಗಳಿಗೆ ನಕಲಿ ಎಸಿಬಿ ತಂಡ ಹಣದ ಬೇಡಿಕೆ ಇಟ್ಟು ಬೆದರಿಕೆ ಕರೆ ಮಾಡಿರುವ ಬಗ್ಗೆ ಪಬ್ಲಿಕ್ ಟಿವಿ ಸವಿಸ್ತಾರವಾದ ವರದಿಯನ್ನ ಪ್ರಸಾರ ಮಾಡುವ ಮೂಲಕ ಜಾಗೃತಿಯನ್ನ ಮೂಡಿಸಿತ್ತು. ವರದಿ ಬಳಿಕ ಈಗ ಭ್ರಷ್ಟಾಚಾರ ನಿಗ್ರಹ ದಳದ ಅಪರ ಪೊಲೀಸ್ ಮಹಾ ನಿರ್ದೇಶಕರು ನಕಲಿ ಎಸಿಬಿಯಿಂದ ಎಚ್ಚರಿಕೆ ಅಂತ ಪ್ರಕಟಣೆ ಹೊರಡಿಸಿದ್ದಾರೆ.
ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲೂ ಇದೇ ಮಾದರಿಯಲ್ಲಿ ಅಧಿಕಾರಿಗಳಿಗೆ ದಾಳಿ ಮಾಡುವುದಾಗಿ ಬೆದರಿಕೆ ಕರೆಗಳು ಬಂದಿವೆ. ನಿಮ್ಮ ಮೇಲೆ ದೂರು ಬಂದಿದೆ ದಾಳಿ ಮಾಡದೇ ಇರಲು ಹಣ ಕೊಡಿ ಅಂತ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಎಚ್ಚರ ವಹಿಸುವಂತೆ ಎಸಿಬಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: ಮರಾಠಾ ಸಮುದಾಯದ ಶ್ರೀಮಂತ್ ಪಾಟೀಲ್ ಇಲ್ಲವೆ ನನಗೆ ಸಚಿವ ಸ್ಥಾನ ಬೇಕು: ಅನಿಲ್ ಬೆನಕೆ
ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕರರಿಗೆ ಬೆದರಿಕೆ ಕರೆ ಮಾಡಿ ಹಣ ವಸೂಲಿ ಮಾಡುತ್ತಿರುವ ಆರೋಪದಲ್ಲಿ ರಾಯಚೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿವೆ. ನಕಲಿ ಎಸಿಬಿ ತಂಡದ ಹೆಸರಿನಲ್ಲಿ ಈ ವರೆಗೆ ರಾಜ್ಯದ ವಿವಿಧೆಡೆ ಒಟ್ಟು 26 ಪ್ರಕರಣ ದಾಖಲಾಗಿವೆ. ಈ ಪೈಕಿ 6 ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದಿದ್ದು ಉಳಿದ 20 ಪ್ರಕರಣಗಳು ತನಿಖಾ ಹಂತದಲ್ಲಿವೆ. ಇದೇ ಮಾದರಿಯಲ್ಲಿ ಹಣ ವಸೂಲಿಗೆ ಬೇಡಿಕೆ ಇಟ್ಟರೆ ಕೂಡಲೇ ಸ್ಥಳೀಯ ಎಸಿಬಿ ಅಧಿಕಾರಿಗಳಿಗೆ ದೂರು ನೀಡಲು ಪ್ರಕಟಣೆಯಲ್ಲಿ ಸೂಚಿಸಲಾಗಿದೆ. ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ‘ನಾಳೆ ಬಾ’ ಎಂಬಂತಿದೆ: ಅಭಯ್ ಪಾಟೀಲ್ ವ್ಯಂಗ್ಯ