ಬೆಂಗಳೂರು: ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda International Airport) ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಹುಚ್ಚಾಟ ಮಾಡಿದ ಪ್ರಕರಣ ನಡೆದಿದೆ.
ಹರಿಯಾಣ ಮೂಲದ ರಾಜೇಶ್ ಕುಮಾರ್ ಬೆಂಗಳೂರಿನಿಂದ (Bengaluru) ಪುಣೆಗೆ (Pune) ಹೊರಟಿದ್ದ, ಈ ವೇಳೆ ವಿಮಾನ ನಿಲ್ದಾಣದ ಟರ್ಮಿನಲ್-2ನಲ್ಲಿ ಚೆಕ್ ಇನ್ ವೇಳೆ ಅಧಿಕಾರಿಗಳ ಬಳಿ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಾನೆ. ಇದರಿಂದ ಆತಂಕಗೊಂಡ ಅಧಿಕಾರಿಗಳು ಬ್ಯಾಗ್ ಚೆಕ್ ಮಾಡಿ, ಕೂಡಲೇ ಆತನನ್ನು ವಶಕ್ಕೆ ಪಡೆದು, ಕೆಐಎಎಲ್ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ – ತುರ್ತು ಭೂ ಸ್ಪರ್ಶ
ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ರಾಜೇಶ್, ತಮಾಷೆಗಾಗಿ ಬಾಂಬ್ ಇದೆ ಎಂಬುದಾಗಿ ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಬಳಿಕ ಪೊಲೀಸರು ಸ್ಟೇಷನ್ ಬೇಲ್ ಮೇಲೆ ಆತನನ್ನು ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ – ಮನನೊಂದು ಸಹೋದರಿ ಆತ್ಮಹತ್ಯೆಗೆ ಯತ್ನ