ಚಾಮರಾಜನಗರ: `ನಾನು ಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ನಿರ್ವಹಿಸ್ತಾ ಇದ್ದೀನಿ’ ಎಂದು ಚಾಮರಾಜನಗರ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದ ನಕಲಿ ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ವಾಸ್ತವ್ಯ, ಜಂಗಲ್ ಸಫಾರಿ, ದೇವರ ದರ್ಶನ ದೊಡ್ಡಸಂಪಿಗೆ ಮರದ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ರಾವ್ ಹೆಸರಿನ ವ್ಯಕ್ತಿಯೊಬ್ಬ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಕರೆ ಮಾಡಿದ್ದಾನೆ. ಇದನ್ನೂ ಓದಿ: ಹೋಳಿಗೆ, ನಿಪ್ಪಟ್ಟು, ಆಲೂ ಕೂರ್ಮಾ; ತೆಲಂಗಾಣ ಸಾಂಪ್ರದಾಯಿಕ ಖಾದ್ಯ ಸವಿದ ಮೋದಿ – ಮೆನುವಿನಲ್ಲಿತ್ತು 50 ಐಟಂ
Advertisement
Advertisement
ಈ ವೇಳೆ ನಿಖರ ಹುದ್ದೆ ಬಗ್ಗೆ ಡಿಸಿ ಕೇಳಿದ್ದಾರೆ. ಆದರೆ ವ್ಯಕ್ತಿ ಹೆಸರು ಹಾಗೂ ಹುದ್ದೆ ಬಹಿರಂಗಪಡಿಸಬಾರದೆಂದು ತಿಳಿಸಿದ್ದಾನೆ. ಅನುಮಾನಗೊಂಡ ಡಿಸಿ ಪ್ರಧಾನ ಮಂತ್ರಿ ಕಚೇರಿ ಹೆಸರು ದುರುಪಯೋಗ ಆರೋಪ ಹಾಗೂ ವಂಚಿಸಲು ಯತ್ನಿಸಿರುವ ಆರೋಪದ ಮೇಲೆ ಪೊಲೀಸರಿಗೆ ದೂರು ನೀಡಿ, ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಅರೆ ನಗ್ನ ಫೋಟೋ ನೋಡಿ ರಶ್ಮಿಕಾ ಹೇಳಿದ್ದು ಹೀಗೆ
Advertisement
Advertisement
ಪೊಲೀಸರು ತನಿಖೆ ಆರಂಭಿಸಿದ್ದು ಅಪರಿಚಿತ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.