ಬಾಗಲಕೋಟೆ: ನಕಲಿ ವೈದ್ಯನ ಎಡವಟ್ಟಿನಿಂದ ಗರ್ಭಧರಿಸಿದ್ದ ಎಮ್ಮೆ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕನಸಗೇರಿ ಗ್ರಾಮದಲ್ಲಿ ನಡೆದಿದೆ.
ಜುಲೈ 26ರಂದು ಈ ಘಟನೆ ನಡೆದಿದ್ದು, ಬಂಧಿತ ನಕಲಿ ವೈದ್ಯನನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದ ಶಿವಾನಂದ ಮಲ್ಲಪ್ಪ ರುದ್ರಪ್ಪ ಎಂದು ಗುರುತಿಸಲಾಗಿದೆ. 10 ತಿಂಗಳ ಎಮ್ಮೆಗೆ ಶಿವಾನಂದ ಮಲ್ಲಪ್ಪ ರುದ್ರಪ್ಪ ಬ್ಲೇಡ್‍ನಿಂದ ಶಸ್ತ್ರಚಿಕಿತ್ಸೆ ಮಾಡಿದ್ದನು. ಇದರಿಂದ ತೀವ್ರ ರಕ್ತಸ್ರಾವ ಉಂಟಾಗಿದ್ದು ಎಮ್ಮೆ ಮತ್ತು ಕರು ದುರ್ಮರಣ ಹೊಂದಿತ್ತು. ಇದನ್ನೂ ಓದಿ: ಗಂಗೆಗೂ ಜಲ ದಿಗ್ಬಂಧನ – ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ವಿಸ್ಮಯ ರೀತಿಯಲ್ಲಿ ಜಲೋಧ್ಬವ
ಇದೀಗ ಘಟನೆ ಬಹಿರಂಗಗೊಂಡ ಹಿನ್ನೆಲೆ ನಕಲಿ ವೈದ್ಯನ ವಿರುದ್ಧ ಮುಧೋಳ ಪಶು ವೈದ್ಯಾಧಿಕಾರಿಗಳು ಲೋಕಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸದ್ಯ ಆರೋಪಿ ಶಿವಾನಂದ ಮಲ್ಲಪ್ಪ ರುದ್ರಪ್ಪನ್ನು ಲೋಕಾಪುರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಪತ್ನಿ ಸಂಬಂಧಿ ಜೊತೆ ಲವ್ವಿ-ಡವ್ವಿ, ವೇಶ್ಯೆ ಪ್ರೀತಿಗೆ ಬಿದ್ದು ಆದ ಸೈಕೋ ಕಿಲ್ಲರ್ – ಮಂಡ್ಯದಲ್ಲೊಂದು ಮರ್ಡರ್ ಮಿಸ್ಟ್ರಿ