ಬೆಂಗಳೂರು: ಶಾಸಕ ಸುರೇಶ್ ಕುಮಾರ್ (Suresh Kumar) ಅವರ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ (Fake Facebook) ಖಾತೆ ತೆರದು ಹಣ ನೀಡುವಂತೆ ಕೇಳಿದ್ದಾರೆ.
ಈ ಸಂಬಂಧ ಸ್ವತಃ ಸಚಿವರೇ ತನ್ನ ಫೇಸ್ಬುಕ್ ಖಾತೆಯಲ್ಲಿ ಸ್ಕ್ರೀನ್ ಶಾಟ್ ಹಾಕಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ನಕಲಿ ಫೇಸ್ ಬುಕ್ ಅಕೌಂಟ್ ತೆಗೆದಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಈ ಕುರಿತು ಸೈಬರ್ ಪೊಲೀಸ್ ವಿಭಾಗಕ್ಕೆ ದೂರು ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
Advertisement
Advertisement
ದಯವಿಟ್ಟು ನನ್ನ ಹೆಸರಿನಲ್ಲಿ ಯಾರಾದರೂ ಹಣ ಕೇಳಿದರೆ ತಾವ್ಯಾರೂ ಸ್ಪಂದಿಸಬಾರದೆಂದು ಮನವಿ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಧಿಕಾರಿಗಳ ವಿರುದ್ಧ ಸಚಿವ ಶ್ರೀರಾಮುಲು ಪ್ರತಿಭಟನೆ